ಲೈಂಗಿಕ ಕಿರುಕುಳ ಆರೋಪ: ಹರಿಯಾಣದ ಕ್ರೀಡಾ ಸಚಿವ ಸಂದೀಪ್ ಸಿಂಗ್ ರಾಜೀನಾಮೆ
ನನ್ನ ಹೆಸರು ಹಾಳು ಮಾಡುವ ಯತ್ನ ನಡೆಯುತ್ತಿದೆ...
Team Udayavani, Jan 1, 2023, 5:22 PM IST
ಚಂಡೀಗಢ : ಲೈಂಗಿಕ ಕಿರುಕುಳ ಪ್ರಕರಣದ ಕುರಿತು ಚಂಡೀಗಢ ಪೊಲೀಸರಿಗೆ ಅಥ್ಲೆಟಿಕ್ಸ್ ತರಬೇತುದಾರ ನೀಡಿದ ದೂರಿನ ಹಿನ್ನೆಲೆಯಲ್ಲಿ ಕ್ರೀಡಾ ಸಚಿವ ಸಂದೀಪ್ ಸಿಂಗ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಸಂದೀಪ್ ಸಿಂಗ್ ನನ್ನ ಹೆಸರು ಹಾಳು ಮಾಡುವ ಉದ್ದೇಶದಿಂದ ಈ ರೀತಿಯ ಸುಳ್ಳು ಆರೋಪಗಳು ನನ್ನ ಮೇಲೆ ಹಾಕುತ್ತಿದ್ದಾರೆ, ಇದರ ಬಗ್ಗೆ ಸಮಗ್ರ ತನಿಖೆ ನಡೆಯಬೇಕು, ತನಿಖೆ ನಡೆಸಿ ಸಮಗ್ರ ವರದಿ ಬರುವವರೆಗೆ ಕ್ರೀಡಾ ಇಲಾಖೆಯ ಜವಾಬ್ದಾರಿಯನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸುವುದಾಗಿ ಹೇಳಿದ್ದಾರೆ.
ಇದಕ್ಕೂ ಮೊದಲು ವಿರೋಧ ಪಕ್ಷವಾದ ಇಂಡಿಯನ್ ನ್ಯಾಷನಲ್ ಲೋಕ ದಳ (ಐಎನ್ಎಲ್ಡಿ) ಕಚೇರಿಯಲ್ಲಿ ದೂರುದಾರ ಮಹಿಳೆ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ್ದು. ಮನೋಹರ್ ಲಾಲ್ ಖಟ್ಟರ್ ಸರ್ಕಾರವು ಸಂದೀಪ್ ಸಿಂಗ್ ಅವರನ್ನು ತಕ್ಷಣವೇ ವಜಾಗೊಳಿಸಬೇಕು ಮತ್ತು ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಬೇಕು ಎಂದು ಒತ್ತಾಯಿಸಿದ್ದರು.
ಸಂದೀಪ್ ಸಿಂಗ್ ಅವರು ಮೊದಲು ನನ್ನನ್ನು ಜಿಮ್ ನಲ್ಲಿ ನೋಡಿದ್ದು, ಬಳಿಕ ಇನ್ಸ್ಟಾಗ್ರಾಂನಲ್ಲಿ ಸಂಪರ್ಕಿಸಿದ್ದರು. ನಂತರ ಭೇಟಿಯಾಗಲು ಒತ್ತಾಯಿಸುತ್ತಿದ್ದರು. ಒಮ್ಮೆ ಇನ್ಸ್ಟಾದಲ್ಲಿ ಮೆಸೇಜ್ ಮಾಡಿ, ನನ್ನ ನ್ಯಾಶನಲ್ ಗೇಮ್ಸ್ ಗಳ ಪ್ರಮಾಣಪತ್ರ ಬಾಕಿ ಇದೆ, ಇದೇ ವೇಳೆ ಭೇಟಿಯಾಗವ ಎಂದಿದ್ದರು ಎಂದು ಮಹಿಳಾ ಕೋಚ್ ದೂರಿನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ನಾಸಿಕ್ :ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ: ಹಲವು ಕಾರ್ಮಿಕರು ಸಿಲುಕಿರುವ ಶಂಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ