ಬಿಸಿನೀರು ಕೊಡುವ ನೆಪ: ಕ್ವಾರಂಟೈನ್ ಕೇಂದ್ರದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಅಟೆಂಡೆಂಟ್
Team Udayavani, Sep 13, 2020, 4:50 PM IST
ಥಾಣೆ( ಮಹಾರಾಷ್ಟ್ರ) : ಜಿಲ್ಲೆಯ ಕೋವಿಡ್ -19 ಕ್ವಾರಂಟೈನ್ ಸೆಂಟರ್ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 27ರ ಹರೆಯದ ಅಟೆಂಡೆಂಟ್ ಒಬ್ಬನನ್ನು ಬಂಧಿಸಲಾಗಿದೆ.
ಈ ಘಟನೆ ಜೂನ್ನಲ್ಲಿ ನಡೆದಿದ್ದು, ಶನಿವಾರ 20ರ ಹರೆಯದ ಮಹಿಳೆ ಪೊಲೀಸ್ ದೂರು ನೀಡಿದಾಗ ಇದು ಬೆಳಕಿಗೆ ಬಂದಿದೆ ಎಂದು ನವಘರ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂಪತ್ ಪಾಟೀಲ್ ಹೇಳಿದ್ದಾರೆ.
ಇಲ್ಲಿನ ಮೀರಾ ರೋಡ್ ಪ್ರದೇಶದಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ತನ್ನ 11ರ ಹರೆಯದ ಸಂಬಂಧಿಯ ಜತೆಗೆ ಅಲ್ಲಿ ಉಳಿದುಕೊಂಡಿದ್ದಾಗ ಆರೋಪಿ ಈ ಅಪರಾಧ ಎಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.
ಕೋವಿಡ್ ವೈರಸ್ ಪಾಸಿಟಿವ್ ಕಂಡುಬಂದಿದ್ದ ಸಂಬಂಧಿಯನ್ನು ನೋಡಿಕೊಳ್ಳಲು ಮಹಿಳೆ ತನ್ನ 10 ತಿಂಗಳ ಮಗಳ ಜತೆಗೆ ಕೇಂದ್ರದಲ್ಲಿ ತಂಗಿದ್ದಳು. ಬಿಸಿನೀರು ನೀಡುವ ನೆಪದಲ್ಲಿ ಆರೋಪಿಯು ರಾತ್ರಿ ಕೋಣೆಗೆ ಭೇಟಿ ನೀಡುತ್ತಿದ್ದನು. ಇದೇ ವೇಳೆ ಆರೋಪಿಯು ಮಹಿಳೆಗೆ ಆಕೆಯ ಮಗುವನ್ನು ಕೊಲ್ಲುವ ಬೆದರಿಕೆ ಹಾಕಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಜೂನ್ ಮೊದಲ ವಾರದಲ್ಲಿ ಆರೋಪಿಯು ಕೋಣೆಯಲ್ಲಿ ಮಹಿಳೆಯ ಮೇಲೆ ಮೂರು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ. ಆರೋಪಿ ತನ್ನ ಕುಟುಂಬ ಸದಸ್ಯರಿಗೆ ಹಾನಿ ಮಾಡಬಹುದೆಂಬ ಭಯದಿಂದಾಗಿ ಮಹಿಳೆ ಆ ಸಮಯದಲ್ಲಿ ಪೊಲೀಸರನ್ನು ಸಂಪರ್ಕಿಸಲಿಲ್ಲ ಎಂದು ಪಾಟೀಲ್ ಹೇಳಿದ್ದಾರೆ.
ಸಂತ್ರಸ್ತೆ ಶನಿವಾರ ದೂರು ದಾಖಲಿಸಿದ್ದು, ಅನಂತರ ಆರೋಪಿಯನ್ನು ಬಂಧಿಸಲಾಗಿದೆ. ಆತನ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 376 (ಅತ್ಯಾಚಾರ) ಮತ್ತು ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ