ಅಯೋಧ್ಯೆ: ಇಂದು ತೀರ್ಪು
Team Udayavani, Mar 8, 2019, 12:50 AM IST
ಹೊಸದಿಲ್ಲಿ: ಅಯೋಧ್ಯೆ ವಿವಾದ ಪರಿಹಾರವನ್ನು ಮಧ್ಯಸ್ಥಿಕೆ ಮೂಲಕ ಪರಿಹರಿಸಬೇಕೋ ಬೇಡವೋ ಎಂಬ ಬಗ್ಗೆ ಸುಪ್ರೀಂಕೋರ್ಟ್ ಶುಕ್ರವಾರ ತೀರ್ಪು ಪ್ರಕಟಿಸಲಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಸಾಂವಿಧಾನಿಕ ಪೀಠ ಬುಧವಾರ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು. ಹಿಂದೂ ಸಂಘಟನೆಗಳ ಪೈಕಿ ನಿಮೋಹಿ ಅಖಾಡಾ ಹೊರತುಪಡಿಸಿ ಉಳಿದೆಲ್ಲವುಗಳೂ ಮಧ್ಯಸ್ಥಿಕೆ ಮೂಲಕ ವಿವಾದ ಪರಿಹರಿಸುವುದರ ಬಗ್ಗೆ ಸಮ್ಮತಿ ಸೂಚಿಸಿದ್ದವು.