ಸುಪ್ರೀಂ ‘ಸಂಧಾನ’ ಸಲಹೆಗೆ ಸಂಘಟನೆಗಳ ಮಿಶ್ರ ಪ್ರತಿಕ್ರಿಯೆ

Team Udayavani, Mar 8, 2019, 6:53 AM IST

ayodhya-issue-600.jpg

ನವದೆಹಲಿ: ಅಯೋಧ್ಯೆಯಲ್ಲಿನ ರಾಮಜನ್ಮಭೂಮಿ ಮತ್ತು ಬಾಬರಿ ಮಸೀದಿ ಜಮೀನು ವಿವಾದವನ್ನು ನ್ಯಾಯಲಯದಿಂದ ಹೊರಗೆ ಸಂಧಾನ ಪ್ರಕ್ರಿಯೆಯ ಮೂಲಕ ಎಂಟು ವಾರಗಳೊಳಗಾಗಿ ಪರಿಹರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠವು ಇಂದು ನೀಡಿರುವ ಆದೇಶಕ್ಕೆ ಹಿಂದೂ ಮತ್ತು ಮುಸ್ಲಿಂ ಸಮುದಾಯ ಹಾಗೂ ವಿವಿಧ ಸಂಘಟನೆಗಳಿಂದ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಹಿಂದೂ ಮಹಾಸಭಾ, ಅಖಿಲ ಭಾರತ ಹಿಂದೂ ಮಹಾಸಭಾದಂತಹ ಸಂಘಟನೆಗಳು ಈ ಆದೇಶವನ್ನು ಸ್ವಾಗತಿಸಿದ್ದರೆ ನಿರ್ಮೋಹಿ ಅಖಾಡವು ಸಂಧಾನಕಾರರ ಕುರಿತಾಗಿ ಅಪಸ್ವರವೆತ್ತಿದೆ.

ಶ್ರೀ ರಾಮಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಅವರು ಸುಪ್ರೀಂ ಕೋರ್ಟ್ ನ ಇಂದಿನ ತೀರ್ಪಿಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ‘ಈ ಹಿಂದೆ ಮಾತುಕತೆ ವಿಫಲಗೊಂಡ ಕಾರಣದಿಂದಲೇ ನಾವು ಕೋರ್ಟ್ ಮೆಟ್ಟಿಲೇರಿದ್ದೆವು. ಅಯೋಧ್ಯೆಯಲ್ಲಿರುವ ಭೂಮಿ ಶ್ರೀ ರಾಮನಿಗೆ ಸೇರಿದ್ದೆಂಬುದಕ್ಕೆ ಪ್ರಬಲವಾದ ಪುರಾವೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಆದರೂ ಸಹ ಈಗ ನ್ಯಾಯಾಲಯವು ಮತ್ತೆ ಮಾತುಕಥೆಗೆ ಸಂಧಾನಕಾರರನ್ನು ನೇಮಿಸಿರುವ ಕ್ರಮ ಸರಿಯಾದುದಲ್ಲ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಅಖಿಲ ಭಾರತ ಹಿಂದೂ ಮಹಾಸಭಾದ ಅಧ್ಯಕ್ಷರಾಗಿರುವ ಸ್ವಾಮಿ ಚಕ್ರಪಾಣಿ ಅವರು ಸುಪ್ರೀಂ ಕೋರ್ಟ್ ನ ಈ ತೀರ್ಪನ್ನು ಸ್ವಾಗತಿಸಿದ್ದಾರೆ. ‘ನಾವು ನ್ಯಾಯಾಲಯದ ಆದೇಶವನ್ನು ಸ್ವಾಗತಿಸುತ್ತೇವೆ, ನಮಗೆ ಇದರಿಂದ ಸಂತೋಷವಾಗಿದೆ, ಮತ್ತು ಶ್ರೀ ಶ್ರೀ ರವಿಶಂಕರ್ ಗರೂಜಿಯವರು ಸಂಧಾನ ಸಮಿತಿಯ ಸದಸ್ಯರಾಗಿರುವುದಕ್ಕೆ ನಮಗೆ ಸಂತೋಷವಿದೆ ಎಂದು ಸ್ವಾಮಿ ಚಕ್ರಪಾಣಿ ಅವರು ತಿಳಿಸಿದ್ದಾರೆ.

‘ಈ ಹಿಂದಿನ ನಮ್ಮ ಸಂಧಾನ ಪ್ರಕ್ರಿಯೆ ನಿರಾಶದಾಯಕವಾಗಿತ್ತು, ಉಚ್ಛನ್ಯಾಯಾಲಯವು ಈ ವಿಚಾರವನ್ನು ಗಮನಕ್ಕೆ ತೆಗೆದುಕೊಂಡಿದೆ ಎಂದು ನಾನು ಭಾವಿಸಿದ್ದೇನೆ’ ಎಂದು ಹಿಂದೂ ಮಹಾಸಭಾದ ನ್ಯಾಯವಾದಿ ವರುಣ್ ಕುಮಾರ್ ಸಿನ್ಹಾ ಅವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಮುಸ್ಲಿಂ ಸಂಘಟನೆಗಳು ನ್ಯಾಯಾಲಯದ ಈ ತೀರ್ಪಿಗೆ ತಮ್ಮ ಸ್ವಾಗತವನ್ನು ವ್ಯಕ್ತಪಡಿಸಿವೆ. ಆದರೆ ಶ್ರೀ ಶ್ರೀ ರವಿಶಂಕರ್ ಗುರೂಜಿಯವರನ್ನು ಸಂಧಾನಕಾರರಲ್ಲಿ ಒಬ್ಬರನ್ನಾಗಿ ನೇಮಕ ಮಾಡಿರುವುದಕ್ಕೆ ಪ್ರಮುಖ ಅರ್ಜಿದಾರರಲ್ಲೊಬ್ಬರಾಗಿರುವ ನಿರ್ಮೋಹಿ ಅಖಾಡ ವಿರೋಧವನ್ನು ವ್ಯಕ್ತಪಡಿಸಿದೆ.

ನಿರ್ಮೋಹಿ ಅಖಾಡವು ನಿವೃತ್ತ ನ್ಯಾಯಮೂರ್ತಿ ಕುರಿಯನ್ ಜೋಸೆಫ್, ಎ.ಕೆ. ಪಟ್ನಾಯಕ್ ಮತ್ತು ಜಿ.ಎಸ್. ಸಿಂಘ್ವಿ ಅವರ ಹೆಸರುಗಳನ್ನು ಸಂಧಾನಕಾರರನ್ನಾಗಿ ಹೆಸರಿಸಿತ್ತು. ಹಿಂದೂ ಮಹಾಸಭಾವು ನಿವೃತ್ತ ಮುಖ್ಯನ್ಯಾಯಮೂರ್ತಿ ಜೆ.ಎಸ್. ಖೇಹರ್ ಮತ್ತು ದೀಪಕ್ ಮಿಶ್ರಾ ಮತ್ತು ನಿವೃತ್ತ ನ್ಯಾಯಮೂರ್ತಿ ಎ.ಕೆ. ಪಟ್ನಾಯಕ್ ಅವರ ಹೆಸರನ್ನು ನಮೂದಿಸಿತ್ತು.

2010ರಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ರಾಮಮಂದಿರ ತೀರ್ಪಿನ ವಿರುದ್ಧ ಹದಿನಾಲ್ಕು ಮೇಲ್ಮನವಿಗಳು ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದವು. ಅಲಹಾಬಾದ್ ಹೈಕೋರ್ಟ್ ಅಂದಿನ ತನ್ನ ತೀರ್ಪಿನಲ್ಲಿ ವಿವಾದಿತ 2.77 ಎಕರೆ ಭೂಮಿಯನ್ನು ಸುನ್ನೀ ವಕ್ಫ್ ಬೋರ್ಡ್, ನಿರ್ಮೋಹಿ ಅಖಾಡ ಮತ್ತು ರಾಮ್ ಲಲ್ಲಾ ಪರವಾಗಿ ಸಮನಾಗಿ ಹಂಚಿಕೆ ಮಾಡಿತ್ತು.

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.