ನಾನು 3 ಲಕ್ಷ ಲೀಡ್‌ನ‌ಲ್ಲಿ ಗೆಲ್ಲದಿದ್ದರೆ ಚುನಾವಣಾ ಪ್ರಕ್ರಿಯೆ ಸರಿಯಿಲ್ಲವೆಂದರ್ಥ

ಎಸ್‌ಪಿ ನಾಯಕ ಅಜಂ ಖಾನ್‌ ಹೊಸ ಲೆಕ್ಕಾಚಾರ

Team Udayavani, May 22, 2019, 10:38 AM IST

ರಾಮ್‌ಪುರ್‌ :ವಿಪಕ್ಷಗಳು ಇವಿಎಂ ವಿಶ್ವಾಸಾರ್ಹತೆ ಪ್ರಶ್ನಿಸಿದ ಬೆನ್ನಲ್ಲೇ ಎಸ್‌ಪಿ ನಾಯಕ, ಅಭ್ಯರ್ಥಿ ಅಜಂ ಖಾನ್‌ ಅವರು ನಾನು 3 ಲಕ್ಷ ಮತಗಳ ಅಂತರದಿಂದ ಗೆಲ್ಲದೇ ಹೋದಲ್ಲಿ ಚುನಾವಣಾ ಪ್ರಕ್ರಿಯೆ ದೇಶದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆದಿಲ್ಲ ಎನ್ನುವುದು ಖಚಿತವಾಗುತ್ತದೆ ಎಂದು ಹೊಸ ಲೆಕ್ಕಾಚಾರ ಮುಂದಿಟ್ಟಿದ್ದಾರೆ.

ಅಜಂ ಖಾನ್‌ ಅವರು ರಾಮ್‌ಪುರ್‌ನಲ್ಲಿ ಬಿಜೆಪಿ ಅಭ್ಯರ್ಥಿ, ಖ್ಯಾತ ನಟಿ ಜಯಪ್ರದಾ ಅವರ ವಿರುದ್ಧ ಕಣಕ್ಕಿಳಿದಿದ್ದಾರೆ.

ಹಲವು ವಿವಾದಾತ್ಮಕ ಹೇಳಿಕೆಗಳು ಮತ್ತು ನಟಿ ಜಯಪ್ರದಾ ಅವರ ವಿರುದ್ಧ ಕೀಳು ಮಟ್ಟದ ಹೇಳಿಕೆ ನೀಡಿ ಚುನಾವಣಾ ಆಯೋಗದಿಂದ ಪ್ರಚಾರ ನಡೆಸದಂತೆ 2 ಬಾರಿ ನಿಷೇಧಕ್ಕೆ ಗುರಿಯಾಗಿದ್ದರು.

ಜಯಪ್ರದಾ ಅವರು ಎಸ್‌ಪಿ ತೊರೆದು ಬಿಜೆಪಿ ಸೇರ್ಪಡೆಯಾಗಿ ಕಣಕ್ಕಿಳಿದಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ