ಬಾಬ್ರಿ ಧ್ವಂಸ ಕೇಸ್, ಮೇ30ಕ್ಕೆ ಖುದ್ದು ಹಾಜರಾಗಿ; ಆಡ್ವಾಣಿಗೆ ಕೋರ್ಟ್
Team Udayavani, May 25, 2017, 3:40 PM IST
ನವದೆಹಲಿ:1992ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ನಿರಂತರವಾಗಿ ನಡೆಯಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರಾದ ಎಲ್.ಕೆ.ಆಡ್ವಾಣಿ, ಉಮಾ ಭಾರತಿ ಹಾಗೂ ಮುರಳಿ ಮನೋಹರ್ ಜೋಶಿ ಅವರು ಮೇ 30ರಂದು ಖುದ್ದಾಗಿ ಕೋರ್ಟ್ ಗೆ ಹಾಜರಾಗಬೇಕೆಂದು ಲಕ್ನೋದ ವಿಶೇಷ ಸಿಬಿಐ ಕೋರ್ಟ್ ಗುರುವಾರ ಸೂಚಿಸಿದೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಂಚಿನಲ್ಲಿ ಶಾಮೀಲಾಗಿದ್ದಾರೆ ಎಂಬ ಪ್ರಕರಣದ ವಿಚಾರಣೆಗೆ ಖುದ್ದು ಹಾಜರಾಗಲು ವಿನಾಯ್ತಿ ನೀಡಬೇಕೆಂದು ಕೋರಿ ಆಡ್ವಾಣಿ ಸೇರಿದಂತೆ ಬಿಜೆಪಿ ಮುಖಂಡರು ಮೇಲ್ಮನವಿ ಸಲ್ಲಿಸಿದ್ದರು.
1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಶುಕ್ರವಾರ ವಿಶೇಷ ಸಿಬಿಐ ಕೋರ್ಟ್ನಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ ಸೇರಿ ಇತರೆ 7 ನಾಯಕರ ವಿರುದ್ಧ ಹೆಚ್ಚುವರಿ ಆರೋಪ ಮೇ 30ರಂದು ನಿಗದಿಯಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ