Balia; ವಧು-ವರರಾಗಿ ಬಂದರೆ 2000 ರೂ.; ಭಾರೀ ವಿವಾಹ ವಂಚನೆ ಬಯಲು
Team Udayavani, Feb 4, 2024, 11:55 AM IST
ಹೊಸದಿಲ್ಲಿ: ಬೃಹತ್ ವಿವಾಹ ವಂಚನೆಯಲ್ಲಿ ಭಾಗಿಯಾದ ಕಾರಣಕ್ಕೆ ಇಬ್ಬರು ಸರ್ಕಾರಿ ಅಧಿಕಾರಿಗಳು ಸೇರಿ 15 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮದುಮಗಳು ಹಾರ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಈ ಹಗರಣ ಬಯಲಾಗಿದೆ. ಕೆಲವು ಪುರುಷರು ತಮ್ಮ ಮುಖಗಳನ್ನು ಮರೆಮಾಚಿ ವರನಂತೆ ನಿಂತಿರುವುದನ್ನು ದೃಶ್ಯಗಳಲ್ಲಿ ಕಾಣಬಹುದು.
ಜನವರಿ 25ರಂದು ಬಲಿಯಾ ಜಿಲ್ಲೆಯಲ್ಲಿ ಸಾಮೂಹಿಕ ವಿವಾಹ ಸಮಾರಂಭ ನಡೆದಿತ್ತು.
ಈ ಸಮಾರಂಭದಲ್ಲಿ ಸುಮಾರು 568 ಜೋಡಿಗಳು ವಿವಾಹವಾದರು ಎಂದು ಅಧಿಕಾರಿಗಳು ಹೇಳುತ್ತಾರೆ, ಆದರೆ ವಧು ಮತ್ತು ವರರಂತೆ ಪೋಸ್ ನೀಡಲು ಹಲವರಿಗೆ ಹಣ ನೀಡಲಾಗಿದೆ ಎಂದು ಕಂಡುಬಂದಿದೆ.
ವಧು-ವರರ ಪೋಸ್ ಕೊಡಲು ಪುರುಷ ಮತ್ತು ಮಹಿಳೆ ಇಬ್ಬರಿಗೂ 500 ರಿಂದ 2,000 ರೂ ಸಂಭಾವನೆ ನೀಡಲಾಗಿದೆ ಎಂದು ಸ್ಥಳೀಯರೊಬ್ಬರು ಆರೋಪಿಸಿದ್ದಾರೆ. “ಕೆಲವು ಮಹಿಳೆಯರಿಗೆ ಯಾರೂ ಇರಲಿಲ್ಲ. ಅವರೇ ಮಾಲೆ ಧರಿಸಿದ್ದರು. ಜನರಿಗೆ 500 ರಿಂದ 2,000 ರೂ ವರೆಗೆ ಹಣ ನೀಡಲಾಗುತ್ತಿದೆ ಎಂದು ನಮಗೆ ತಿಳಿದು ಬಂದಿದೆ,” ಎಂದು ವಿಮಲ್ ಕುಮಾರ್ ಪಾಠಕ್ ಹೇಳಿದರು.
“ನಾನು ಮದುವೆಯನ್ನು ನೋಡಲು ಅಲ್ಲಿಗೆ ಹೋಗಿದ್ದೆ. ಅವರು ನನ್ನನ್ನು ಅಲ್ಲೇ ಕೂರಿಸಿದರು. ಅವರು ನನಗೆ ಹಣ ನೀಡುವುದಾಗಿ ಹೇಳಿದರು. ಹೀಗೆ ಹಲವರನ್ನು ವಧು- ವರರಾಗಿ ಕೂರಿಸಲಾಯಿತು” ಎಂದು 19 ವರ್ಷದ ರಾಜ್ ಕುಮಾರ್ ಎಂಬಾತ ಹೇಳಿದರು.
ಬಿಜೆಪಿ ಶಾಸಕ ಕೇತ್ಕಿ ಸಿಂಗ್ ಅವರು ಈ ಸಮುದಾಯ ವಿವಾಹಕ್ಕೆ ಮುಖ್ಯ ಅತಿಥಿಯಾಗಿದ್ದರು.
ಸರ್ಕಾರಿ ವೆಬ್ಸೈಟ್ ಪ್ರಕಾರ, ಈ ಯೋಜನೆಯಡಿ ಸರ್ಕಾರವು 51,000 ರೂ. ನೀಡುತ್ತದೆ. ಇದರಲ್ಲಿ 35,000 ರೂ ಹುಡುಗಿಗೆ, 10,000 ರೂ ಮದುವೆಯ ಸಾಮಗ್ರಿಗಳನ್ನು ಖರೀದಿಸಲು ಮತ್ತು 6,000 ರೂ ಕಾರ್ಯಕ್ರಮಕ್ಕೆ ನೀಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ