ಬುರ್ಖಾ ನಿಷೇಧಿಸಿದ್ದಕ್ಕೆ ಬೆದರಿಕೆ

Team Udayavani, May 5, 2019, 7:16 AM IST

ತಿರುವನಂತಪುರ: ಕೆಲವೇ ದಿನಗಳ ಹಿಂದಷ್ಟೇ ಕೇರಳದ ಮುಸ್ಲಿಂ ಎಜುಕೇಶನ್‌ ಸೊಸೈಟಿಯಲ್ಲಿ ಬುರ್ಖಾ ನಿಷೇಧದ ಆದೇಶ ಹೊರಡಿಸಿದ್ದು, ಸಂಸ್ಥೆಯ ಮುಖ್ಯಸ್ಯ ಪಿಎ ಫ‌ಜಲ್ ಗಫ‌ೂರ್‌ಗೆ ಅನಾಮಿಕ ವ್ಯಕ್ತಿಗಳಿಂದ ಪ್ರಾಣ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಅವರು ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದಾರೆ. ಈ ಆದೇಶವನ್ನು ಹಿಂಪಡೆಯದಿದ್ದರೆ ಜೀವ ತೆಗೆಯುವುದಾಗಿ ಕರೆ ಮಾಡಿದವರು ಬೆದರಿಸಿದ್ದಾರೆ.

ಕರೆ ಮಾಡಿದಾತ ಕೆಟ್ಟ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಗಫ‌ೂರ್‌ ಹೇಳಿದ್ದಾರೆ. ಎಪ್ರಿಲ್ 17ರಂದು ಹೊರಡಿಸಲಾದ ಸುತ್ತೋಲೆಯಲ್ಲಿ ಮುಖ ಮುಚ್ಚುವ ಯಾವುದೇ ಬಟ್ಟೆಯನ್ನು ಧರಿಸಬಾರದು ಎಂದು ಸೂಚಿಸಲಾಗಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಈ ಆದೇಶ ಜಾರಿಗೆ ಬರಲಿದ್ದು, ಸಾಮಾನ್ಯ ಸಂಪ್ರದಾಯಕ್ಕೆ ಅನುಗುಣವಾಗಿ ಉಡುಪು ಧರಿಸಬೇಕು ಎಂದು ಸೂಚಸಿಲಾಗಿದೆ. ಇದಕ್ಕೆ ಸಾಂಪ್ರದಾಯಿಕ ಮುಸ್ಲಿಂ ಸಮುದಾಯ ಆಕ್ಷೇಪ ವ್ಯಕ್ತಪಡಿಸಿದೆ. ಆದರೆ ಶಿಕ್ಷಣ ಸಂಸ್ಥೆ ಇದಕ್ಕೆ ಬೆದರದೇ ತನ್ನ ನಿಲುವಿಗೆ ಬದ್ಧವಾಗಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೆಂಗಳೂರು: ರಾಜ್ಯದಲ್ಲಿ ಐದು ತಿಂಗಳ ಹಿಂದೆ ನಡೆದ ರಾಜಕೀಯ ಪ್ರಹಸನದ ಅನಂತರ ರಚನೆಯಾದ ಬಿಜೆಪಿ ಸರಕಾರದ ಅಳಿವು-ಉಳಿವು ಹಾಗೂ ಅನರ್ಹಗೊಂಡ 17 ಶಾಸಕರ ಪೈಕಿ ಉಪಚುನಾವಣೆಗೆ...

  • ಹೊಸದಿಲ್ಲಿ: ಸೋಮವಾರದಿಂದ ರಣಜಿ ಪಂದ್ಯಾವಳಿ ಆರಂಭವಾಗಲಿದೆ. ಆದರೆ ಬಿಸಿಸಿಐ ಇನ್ನೂ ಅಂಕಣ ಹೇಗಿರಬೇಕೆಂಬ ಮಾರ್ಗದರ್ಶಿ ಸೂತ್ರಗಳನ್ನು ತಿಳಿಸಿಲ್ಲ ಎಂದು ಕ್ಯುರೇಟರ್‌ಗಳು...

  • ಹೊಸದಿಲ್ಲಿ: ಎಲ್ಲ ವಾಹನ ಮಾಲಕರೂ ತಮ್ಮ ವಾಹನಗಳ ಸಂಖ್ಯೆಗೆ ತಮ್ಮ ಮೊಬೈಲ್‌ ಸಂಖ್ಯೆಗಳನ್ನು ಜೋಡಿಸುವ ನಿಯಮ ಎ. 1ರಿಂದ ದೇಶವ್ಯಾಪಿ ಕಡ್ಡಾಯವಾಗಲಿದೆ. ಕೇಂದ್ರ ಸಾರಿಗೆ...

  • ಕೋಟಿ ರೂ. ಎನ್ನುವುದು ನಮಗೆ ಇಂದಿಗೂ ಕನಸು. ಅಷ್ಟು ಹಣ ಸಂಪಾದಿಸಲು ಎಲ್ಲರಿಗೂ ಸಾಧ್ಯವಾಗುವುದಿಲ್ಲ. ಆದರೆ, ಬ್ಯಾಂಕಿನಲ್ಲಿ ತಿಂಗಳಿಗೆ ಕೇವಲ 5,000ರೂ. ಕೂಡಿಡುವುದರ...

  • ಮೇಲುನೋಟಕ್ಕೆ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕುಗಳ ನಡುವೆ ಜನರಿಗೆ ವ್ಯತ್ಯಾಸವೇನೂ ಕಾಣುವುದಿಲ್ಲ. ಅವೆರಡೂ ಒಂದೇ ರೀತಿ ಕಾರ್ಯ ನಿರ್ವಹಿಸುತ್ತಿರುವಂತೆ ಕಾಣುತ್ತದೆ....