ಏಕಬಳಕೆಯ ಪ್ಲಾಸ್ಟಿಕ್ ಉತ್ಪನ್ನ ನಿಷೇಧ
Team Udayavani, Aug 14, 2021, 7:40 AM IST
ಹೊಸದಿಲ್ಲಿ: ಒಮ್ಮೆ ಬಳಸಿ ಎಸೆಯುವ ಪ್ಲಾಸ್ಟಿಕ್ ವಸ್ತುಗಳನ್ನು ಮುಂದಿನ ವರ್ಷದ ಜುಲೈ 1ರಿಂದ ನಿಷೇಧಿಸುವುದಾಗಿ ಕೇಂದ್ರ ಸರಕಾರ ಘೋಷಿಸಿದೆ. ಏಕ ಬಳಕೆಯ ಪ್ಲಾಸ್ಟಿಕ್ ಲೋಟ, ತಟ್ಟೆ, ಸ್ಟ್ರಾ ಇತ್ಯಾದಿಗಳಿಗೆ ನಿಷೇಧ ಬೀಳಲಿದೆ.
ಅಲ್ಲದೆ ಪ್ಲಾಸ್ಟಿಕ್ ಚೀಲಗಳ ದಪ್ಪವನ್ನು 50 ಮೈಕ್ರಾನ್ಗಳಿಂದ 120 ಮೈಕ್ರಾನ್ಗಳಿಗೆ ಏರಿಸಲು ಸರಕಾರ ನಿರ್ಧರಿಸಿದೆ. ಇದು 2 ಹಂತಗಳಲ್ಲಿ ಅನುಷ್ಠಾನ ಗೊಳ್ಳಲಿದೆ. ಮೊದಲನೇ ಹಂತದಲ್ಲಿ ಪ್ರಸಕ್ತ ವರ್ಷದ ಸೆ. 30ರ ಬಳಿಕ 75 ಮೈಕ್ರಾನ್ಗಳಿಗಿಂತ ಕಡಿಮೆ ದಪ್ಪದ ಪ್ಲಾಸ್ಟಿಕ್ ಚೀಲಗಳಿಗೆ ನಿಷೇಧ ವಿಧಿಸಲಾಗುತ್ತದೆ. 2022ರ ಡಿ. 31ರ ಬಳಿಕ 120 ಮೈಕ್ರಾನ್ಗಳಿಗಿಂತ ಕಡಿಮೆ ದಪ್ಪದ ಬ್ಯಾಗ್ಗಳಿಗೆ ಸಂಪೂರ್ಣ ನಿಷೇಧ ವಿಧಿಸಲಾಗುತ್ತದೆ.
ಯಾವುದೆಲ್ಲ ನಿಷೇಧ? :
ಪ್ಲಾಸ್ಟಿಕ್ ಹಿಡಿ ಇರುವ ಇಯರ್ ಬಡ್, ಬಲೂನುಗಳ ಪ್ಲಾಸ್ಟಿಕ್ ಹಿಡಿಕೆ, ಪ್ಲಾಸ್ಟಿಕ್ ಧ್ವಜ, ಕ್ಯಾಂಡಿ ಸ್ಟಿಕ್, ಐಸ್ಕ್ರೀಂ ಸ್ಟಿಕ್, ಅಲಂಕಾರ ಕ್ಕಾಗಿ ಥರ್ಮೊ ಕೋಲ್, ಪ್ಲಾಸ್ಟಿಕ್ನ ತಟ್ಟೆ, ಕಪ್, ಲೋಟ, ಫೋರ್ಕ್, ಚಮಚೆ, ಚೂರಿ ಯಂತಹ ಕಟ್ಲೆರಿ ವಸ್ತುಗಳು, ಸಿಹಿ ತಿಂಡಿ, ಆಮಂತ್ರಣ ಪತ್ರ, ಸಿಗರೇಟು ಪ್ಯಾಕ್ ನಂಥವಕ್ಕೆ ಪ್ಲಾಸ್ಟಿಕ್ ಹೊದಿಕೆ, 100 ಮೈಕ್ರಾನ್ ಗಳಿಗಿಂತ ಕಡಿಮೆ ದಪ್ಪದ ಪ್ಲಾಸ್ಟಿಕ್ ಅಥವಾ ಪಿವಿಸಿ ಬ್ಯಾನರ್ಗಳು, ಕಲಕುವ ಹಿಡಿಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ