
ಗಡಿ ವಿವಾದ: ಅಮಿತ್ ಶಾ ಮಧ್ಯಸ್ಥಿಕೆ ವಹಿಸಬೇಕು: ಸಂಸದೆ ಸುಪ್ರಿಯಾ ಸುಳೆ
Team Udayavani, Dec 7, 2022, 5:30 PM IST

ನವದೆಹಲಿ: ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ಸಮಸ್ಯೆಗೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ತರಾಟೆಗೆ ತೆಗೆದುಕೊಂಡರು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.
ಲೋಕಸಭೆಯಲ್ಲಿ ಮಾತನಾಡಿದ ಅವರು ಕಳೆದ ಹತ್ತು ದಿನಗಳಿಂದ ಮಹಾರಾಷ್ಟ್ರದಲ್ಲಿ ಹೊಸ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಮಹಾರಾಷ್ಟ್ರದ ನೆರೆ ರಾಜ್ಯ ಕರ್ನಾಟಕದ ಮುಖ್ಯಮಂತ್ರಿ ಮಹಾರಾಷ್ಟ್ರದ ಬಗ್ಗೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಮಂಗಳವಾರ ಗಡಿ ದಾಟಿ, ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿರುವ ನಮ್ಮ ಜನ ಕರ್ನಾಟಕಕ್ಕೆ ಹೋಗಲು ಯತ್ನಿಸುತ್ತಿದ್ದರು. ಆದರೆ ಅವರನ್ನು ಥಳಿಸಲಾಯಿತು. ಕಳೆದ ಹತ್ತು ದಿನಗಳಿಂದ ಮಹಾರಾಷ್ಟ್ರದ ವಿರುದ್ಧ ಷಡ್ಯಂತ್ರ ರೂಪಿಸಲಾಗುತ್ತಿದೆ ಎಂದು ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಹೇಳಿದ್ದಾರೆ.
ನಮ್ಮದು ಒಂದು ದೇಶ ಮತ್ತು ಈ ದೇಶದಲ್ಲಿ ಈ ರೀತಿಯ ಘಟನೆ ನಡೆಯಬಾರದು. ಈ ಬಗ್ಗೆ ಮಧ್ಯಸ್ಥಿಕ್ಕೆ ವಹಿಸುವಂತೆ ಅಮಿತ್ ಶಾ ಅವರಲ್ಲಿ ಮನವಿ ಮಾಡುತ್ತೇನೆ ಎಂದು ಸುಪ್ರಿಯಾ ಸುಳೆ ಹೇಳಿದ್ದಾರೆ.
ಫಡ್ನವೀಸ್- ಅಮಿತ್ ಶಾ ಸಮಾಲೋಚನೆ
ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಮಧ್ಯೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಈ ವಿಷಯದ ಬಗ್ಗೆ ಮಾತನಾಡುವುದಾಗಿ ಹೇಳಿದ್ದಾರೆ.
“ನಾನೇ ಕರ್ನಾಟಕದ ಮುಖ್ಯಮಂತ್ರಿಯೊಂದಿಗೆ ಮಾತನಾಡಿದ್ದೇನೆ. ಶರದ್ ಪವಾರ್ ಅವರು ಕರ್ನಾಟಕಕ್ಕೆ ಹೋಗುವ ಅಗತ್ಯವಿಲ್ಲ. ಈ ವಿವಾದದ ಬಗ್ಗೆ ನಾನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡುತ್ತೇನೆ ಮತ್ತು ಅವರು ಶೀಘ್ರದಲ್ಲೇ ಈ ವಿಷಯವನ್ನು ಪರಿಶೀಲಿಸುತ್ತಾರೆ” ಎಂದು ಫಡ್ನವೀಸ್ ಹೇಳಿದರು.
ಮಹಾರಾಷ್ಟ್ರ ಮತ್ತು ಕರ್ನಾಟಕದ ಜನರು ಶಾಂತಿಯನ್ನು ಕಾಪಾಡಬೇಕು ಮತ್ತು ಕಾನೂನು ಸುವ್ಯವಸ್ಥೆಯನ್ನು ತಮ್ಮ ಕೈಗೆ ತೆಗೆದುಕೊಳ್ಳಬಾರದು ಎಂದು ಅವರು ಮನವಿ ಮಾಡಿದರು.
ಗಡಿ ವಿವಾದದ ವಿಷಯ ಸುಪ್ರೀಂ ಕೋರ್ಟ್‌ನಲ್ಲಿದೆ, ಆದ್ದರಿಂದ ಜನರು ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವುದು ಸರಿಯಲ್ಲ ಎಂದು ಅವರು ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರ ಬಜೆಟ್ 2023: ”ಇದು ಚುನಾವಣೆಗಾಗಿ” ಎಂದು ಖರ್ಗೆ ಸೇರಿ ಹಲವು ವಿಪಕ್ಷಗಳ ಟೀಕೆ

ಈ ಬಜೆಟ್ ಕರ್ನಾಟಕದ ಪಾಲಿಗೆ ಗೇಮ್ ಚೇಂಜರ್ : ತೇಜಸ್ವಿ ಸೂರ್ಯ

ಕೇಂದ್ರ ಬಜೆಟ್ 2023:ಸಿಹಿ ಸುದ್ದಿ-ಪ್ರಧಾನ್ ಮಂತ್ರಿ ಆವಾಸ್ ಯೋಜನೆಗೆ 79ಸಾವಿರ ಕೋಟಿ ಅನುದಾನ

ಅಮೃತ್ ಕಾಲದ ಮೊದಲ ಬಜೆಟ್ ಸಮಾಜದ ಕನಸುಗಳನ್ನು ಈಡೇರಿಸಲಿದೆ: ಪ್ರಧಾನಿ ಮೋದಿ

5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿ ತಲುಪಲು ಈ ಬಜೆಟ್ ಸಹಕಾರಿ: ರಾಜನಾಥ್ ಸಿಂಗ್
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
