
ಪಶ್ಚಿಮ ಬಂಗಾಳ: ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ
Team Udayavani, Apr 2, 2023, 1:03 PM IST

ಕೋಲ್ಕತಾ: ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಶನಿವಾರ ರಾತ್ರಿ (ಏ. 1ರಂದು) ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ ನಡೆದಿದೆ.
ರಾಜು ಝಾ ಕೊಲೆಯಾದ ಬಿಜೆಪಿ ಮುಖಂಡ. ಅಕ್ರಮ ಕಲ್ಲಿದ್ದಲು ವ್ಯವಹಾರ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಈ ಹಿಂದೆ ರಾಜು ಝಾ ಅವರ ರಾಜು ಝಾ ಅವರು 2021ರ ರಾಜ್ಯ ಚುನಾವಣೆಗೆ ಮುನ್ನ ಬಿಜೆಪಿ ಸೇರಿದ್ದರು.
ಇದನ್ನೂ ಓದಿ:ಮಂಗಳೂರು ಜಿಲ್ಲಾ ಕಾರಾಗೃಹ: ಭಾರೀ ಸಂಖ್ಯೆಯ ಪೊಲೀಸರಿಂದ ತಪಾಸಣೆ
ರಾಜು ಝಾ ಶನಿವಾರ ರಾತ್ರಿ ತನ್ನ ಸ್ನೇಹಿತನ ಜೊತೆಯಲ್ಲಿ ವಾಹನದಲ್ಲಿ ಹೋಗುತ್ತಿದ್ದ ವೇಳೆ ಶಕ್ತಿಗಢ ಕಾರನನು ನಿಲ್ಲಿಸಿದ್ದಾರೆ. ಕಾರು ನಿಲ್ಲಿಸಿದ ವೇಳೆ ಅದೇ ಜಾಗದಲ್ಲಿ ಮತ್ತೊಂದು ವಾಹನ ಬಂದು ನಿಂತಿದೆ. ಕಾರಿನಿಂದ ಇಳಿದ ದುಷ್ಕರ್ಮಿಗಳು ರಾಜು ಝಾ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡು ತಗುಲಿದ ರಾಜು ಝಾ ಮೃತಪಟ್ಟಿದ್ದಾರೆ. ರಾಜು ಅವರ ಸ್ನೇಹಿನಿಗೆ ಗುಂಡೇಟು ಬಿದ್ದು ಅವರು ಗಾಯಗೊಂಡಿದ್ದಾರೆ.
ಪೊಲೀಸರು ಈ ಬಗ್ಗೆ ಅಕ್ಕಪಕ್ಕದವರ ಬಗ್ಗೆ ವಿಚಾರಣೆ ನಡೆಸಿ, ಸಿಸಿಟಿವಿ ಮೂಲಕ ಪರಿಶೀಲಿಸಿ ವಾಹನ ಹಾಗೂ ಆರೋಪಿಗಳ ಹುಡುಕಾಟ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ

Missing: ಕಾಂಗ್ರೆಸ್ ಟ್ವೀಟ್ ಗೆ ಕಟುವಾಗಿ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ

ಅಹ್ಮದ್ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್ ಶಿಂಧೆ

Gyanvapi Case: ಮಸೀದಿ ಸಮಿತಿಯ ಸವಾಲು ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್