ದಲಿತ ಪ್ರತಿಭಟನೆ: ಆದೇಶ ಪುನರ್‌ ವಿಮರ್ಶೆಗೆ ಸುಪ್ರೀಂ ಸಮ್ಮತಿ

Team Udayavani, Apr 3, 2018, 11:17 AM IST

Bharat-Bundh1-700.jpg

ಹೊಸದಿಲ್ಲಿ : ನಿನ್ನೆ ಸೋಮವಾರ ನಡೆದಿದ್ದ ಭಾರತ್‌ ಬಂದ್‌ ಹಿಂಸಾತ್ಮಕ ಪ್ರತಿಭಟನೆಯಲ್ಲಿ ದೇಶಾದ್ಯಂತ 10 ಮಂದಿ ಬಲಿಯಾಗಿ ಪೊಲೀಸರ ಸಹಿತ 65 ಮಂದಿ ಗಾಯಗೊಂಡ ಬಳಿಕ ಎಚ್ಚೆತ್ತುಕೊಂಡ ಸರ್ವೋಚ್ಚ ನ್ಯಾಯಾಲಯ ಇಂದು ಮಂಗಳವಾರ ಕೇಂದ್ರ ಸರಕಾರ ಸಲ್ಲಿಸಿರುವ ಎಸ್‌ಸಿ/ಎಸ್‌ಟಿ ಕಾಯಿದೆಯ ಮೇಲಿನ ತನ್ನ ಆದೇಶದ ಪುನರ್‌ ವಿಮರ್ಶೆ ಕೋರಿಕೆಯ ಅರ್ಜಿಯ ವಿಚಾರಣೆಯನ್ನು ಕೈಗತ್ತಿಕೊಳ್ಳಲು ಒಪ್ಪಿಕೊಂಡಿದೆ. ಹಿಂಸಾತ್ಮಕ ಭಾರತ್‌ ಬಂದ್‌ನಿಂದಾಗಿ ದೇಶದಲ್ಲಿ ತುರ್ತು ಪರಿಸ್ಥಿತಿಯಂತಹ ಸನ್ನಿವೇಶ ತಲೆದೋರಿದೆ ಎಂದು ಅಟಾರ್ನಿ ಜನರಲ್‌ ಅವರು ಇಂದು ಸುಪ್ರೀಂ ಕೋರ್ಟಿಗೆ ತಿಳಿಸಿದರು. 

ಸುಪ್ರೀಂ ಕೋರ್ಟ್‌ ತೀರ್ಪಿನ ಪರಿಣಾಮವಾಗಿ ಎಸ್‌ಸಿ/ಎಸ್‌ಟಿ ಕಾಯಿದೆ ದುರ್ಬಲಗೊಂಡದ್ದನ್ನು ಪ್ರತಿಭಟಿಸಿ ನಿನ್ನೆ ನಡೆದಿದ್ದ ಭಾರತ ಬಂದ್‌  ವೇಳೆ ಉದ್ರಿಕ್ತ ಪ್ರತಿಭಟನಕಾರರು ಪಂಜಾಬ್‌, ಉತ್ತರ ಪ್ರದೇಶ, ಬಿಹಾರ ಗುಜರಾತ್‌, ಮಧ್ಯಪ್ರದೇಶ, ಜಾರ್ಖಂಡ್‌, ಉತ್ತರಾಖಂಡ ಮತ್ತು ಒಡಿಶಾದಲ್ಲಿ ರೈಲು ಹಳಿಗಳ ಮೇಲೆ ಮತ್ತು ರಸ್ತೆಗಳ ಮೇಲೆ ಧರಣಿ ಕುಳಿತು ರೈಲು ಮತ್ತು ಸಾರಿಗೆ ಸಂಚಾರವನ್ನು ತಡೆದಿದ್ದರು. ಹಲವಾರು ವಾಹನಗಳಿಗೆ ಬೆಂಕಿ ಕೊಟ್ಟಿದ್ದರು; ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದ್ದರು ಮತ್ತು ಪೊಲೀಸರ ಮೇಲೆ ಕಲ್ಲೆಸೆದು ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದರು. 

ಇಂದು ಕೂಡ ದೇಶದ ವಿವಿಧೆಡೆ ಪ್ರತಿಭಟನಕಾರರಿಂದ ಪ್ರತಿಭಟನೆ ಮುಂದುವರಿದಿದ್ದು ಅಲ್ಲಲ್ಲಿ ಗಲಭೆ, ಹಿಂಸೆ, ಕಲ್ಲೆಸತೆ, ವಾಹನಗಳಿಗೆ ಬೆಂಕಿ, ರಾಸ್ತಾ ರೋಕೋ ಮುಂತಾಗಿ ವಿವಿಧ ಬಗೆಯಲ್ಲಿ ಅಕ್ರೋಶ ವ್ಯಕ್ತವಾಗುತ್ತಿದೆ. 

ಕಳೆದ ಮಾರ್ಚ್‌ 20ರಂದು ಸರ್ವೋಚ್ಚ ನ್ಯಾಯಾಲಯ ಪ್ರಾಮಾಣಿಕ ಸರಕಾರಿ ಅಧಿಕಾರಿಗಳಿಗೆ ತಮ್ಮ ಕರ್ತವ್ಯಗಳನ್ನು ನಿರ್ಭಯದಿಂದ ನಿರ್ವಹಿಸಲು ಮತ್ತು ಬ್ಲಾಕ್‌ ಮೇಲ್‌ಗೆ ಗುರಿಯಾಗುವುದನ್ನು ತಪ್ಪಿಸಲು ಎಸ್‌ಸಿ/ಎಸ್‌ಟಿ ಕಾಯಿದೆಯ ಕಾಠಿನ್ಯವನ್ನು ಕಡಿಮೆ ಮಾಡುವ ಆದೇಶವನ್ನು ಪ್ರಕಟಿಸಿತ್ತು. ಇದರಿಂದಾಗಿ ಕಾಯಿದೆಯು ದುರ್ಬಲವಾಯಿತೆಂಬುದು ಮತ್ತು ತಮ್ಮ ವಿರುದ್ಧದ ತಾರತಮ್ಯಕ್ಕೆ ಅನುಕೂಲವಾಯಿತೆಂಬುದು ದಲಿತರ ಆರೋಪವಾಗಿದ್ದು ಅಂತೆಯೇ ಪ್ರತಿಭಟನೆ ನಡೆಸಲು ನಿನ್ನೆ ಮಂಗಳವಾರ ಭಾರತ್‌ ಬಂದ್‌ ನಡೆಸಲಾಗಿತ್ತು.

ಟಾಪ್ ನ್ಯೂಸ್

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

2-lungs

Lung Health: ಶ್ವಾಸಕೋಶಗಳ ಆರೋಗ್ಯದಲ್ಲಿ ವಿಟಮಿನ್‌ಗಳ ಪಾತ್ರ

200 days of shooting for yash toxic movie

Yash ಟಾಕ್ಸಿಕ್‌ ಸಿನಿಮಾ 200 ದಿನಗಳ ಶೂಟಿಂಗ್‌; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mob

‘Deepfake’ ತಡೆಗೆ ಮಸೂದೆ? 

1-pS

Parliament ಇಂದು ಪ್ರೇರಣ ಸ್ಥಳ ಉದ್ಘಾಟನೆ; ವಿಪಕ್ಷ ವಿರೋಧ

amazon

Break ಇಲ್ಲದೆ ಅಮೆಜಾನ್‌ ಗೋದಾಮುಗಳಲ್ಲಿ ಕಾರ್ಮಿಕರಿಗೆ ಕೆಲಸ?

1-asaas

Party ಬಿಟ್ಟು ಹೋದವರನ್ನು ವಾಪಸ್‌ ಸೇರಿಸಿಕೊಳ್ಳಲ್ಲ: ಉದ್ಧವ್‌, ಪವಾರ್‌

Exam

UPSC ಸಿವಿಲ್‌ ಪ್ರಿಲಿಮ್ಸ್‌ ಪರೀಕ್ಷೆ ಇಂದು : 2 ಹಂತ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

udupi

Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

2-lungs

Lung Health: ಶ್ವಾಸಕೋಶಗಳ ಆರೋಗ್ಯದಲ್ಲಿ ವಿಟಮಿನ್‌ಗಳ ಪಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.