ಭೋಪಾಲ್ : ಮೂರೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿದ ಶಾಲಾ ಬಸ್ ಚಾಲಕನ ಮನೆ ಧ್ವಂಸ
Team Udayavani, Sep 14, 2022, 8:00 AM IST
ಭೋಪಾಲ್: ಮಧ್ಯಪ್ರದೇಶದ ಭೋಪಾಲ್ನಲ್ಲಿ ಮೂರೂವರೆ ವರ್ಷದ ನರ್ಸರಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿತ ಶಾಲಾ ಬಸ್ ಚಾಲಕನ ಮನೆಯನ್ನು ಅಧಿಕಾರಿಗಳು ಮಂಗಳವಾರ ನೆಲಸಮಗೊಳಿಸಿದ್ದಾರೆ.
ಭೋಪಾಲ್ನ ಶಾಹಪುರ ಪ್ರದೇಶದಲ್ಲಿದ್ದ ಆರೋಪಿಯ ಮನೆ ಪೊಲೀಸರ ಮೇಲ್ವಿಚಾರಣೆಯಲ್ಲಿ ನೆಲಸಮಗೊಳಿಸಲಾಗಿದೆ.
ಅನಧಿಕೃತವಾಗಿ ಮನೆ ನಿರ್ಮಾಣಗೊಳಿಸಿರುವುದೇ ಮನೆ ಕೆಡವಲು ಅಧಿಕೃತ ಕಾರಣ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಳೆದ ಗುರುವಾರ ಭೋಪಾಲ್ನ ಪ್ರತಿಷ್ಠಿತ ಖಾಸಗಿ ನರ್ಸರಿ ಶಾಲೆಯಲ್ಲಿ ಓದುತ್ತಿದ್ದ ಮಗುವಿನ ಮೇಲೆ ಶಾಲಾ ಬಸ್ ಚಾಲಕ ಬಸ್ಸಿನಲ್ಲೇ ಅತ್ಯಾಚಾರ ವೆಸಗಿದ್ದ ಎನ್ನಲಾಗಿದ್ದು ಅಲ್ಲದೆ ಈ ವೇಳೆ ಬಸ್ಸಿನಲ್ಲಿ ಮಹಿಳಾ ಸಹಾಯಕಿಯೂ ಕೂಡಾ ಇದ್ದು ಈ ಕುರಿತಂತೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು ತನಿಖೆ ಕೈಗೆತ್ತಿಕೊಂಡ ಪೊಲೀಸರು ಇದೀಗ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376-ಎಬಿ (12 ವರ್ಷದೊಳಗಿನ ಬಾಲಕಿಯ ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಇದನ್ನೂ ಓದಿ : ರಾಷ್ಟ್ರೀಯ ಸಿನಿಮಾ ದಿನ ಮುಂದೂಡಿಕೆ; ಸೆ.23ಕ್ಕೆ 75 ರೂ.ಗೆ ಸಿನಿಮಾ ಟಿಕೆಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!