ನ. 29ರೊಳಗೆ ಬಿಹಾರ ವಿಧಾನಸಭಾ ಚುನಾವಣೆ
Team Udayavani, Sep 5, 2020, 12:26 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಬಿಹಾರ ವಿಧಾನಸಭಾ ಚುನಾವಣೆ ಹಾಗೂ 65 ಕ್ಷೇತ್ರಗಳ ಉಪಚುನಾವಣೆ ಒಂದೇ ಸಮಯದಲ್ಲಿ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಬಿಹಾರ ವಿಧಾನಸಭೆ ಅವಧಿ ನ. 29ಕ್ಕೆ ಪೂರ್ಣಗೊಳ್ಳಲಿದ್ದು, ಇದಕ್ಕೂ ಮುನ್ನವೇ ಅಂದರೆ ನಿಗದಿತ ಸಮಯದಲ್ಲಿ ಚುನಾವಣೆ ನಡೆಯಲಿದೆ. ಅಲ್ಲದೇ ಮಧ್ಯಪ್ರದೇಶ, ಉತ್ತರ ಪ್ರದೇಶ, ಕೇರಳ, ತಮಿಳುನಾಡು, ಅಸ್ಸಾಂ ಮತ್ತಿತರ ರಾಜ್ಯಗಳಲ್ಲಿ ತೆರವಾಗಿರುವ 64 ವಿಧಾನಸಭಾ ಹಾಗೂ ಒಂದು ಲೋಕಸಭಾ ಉಪಚುನಾವಣೆ ಇದೇ ಅವಧಿಯಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ “ಇಂಡಿಯಾ ಟುಡೆ ವಾಹಿನಿ’ಗೆ ತಿಳಿಸಿದ್ದಾರೆ. ಬಿಹಾರದಲ್ಲಿ ವಿಧಾನಸಭಾ ಚುನಾವಣೆಯನ್ನು ಸುರಕ್ಷತಾ ಕ್ರಮಗಳೊಂದಿಗೆ ನಡೆಸಲು ಆಯೋಗ ಸಿದ್ಧತೆ ನಡೆಸುತ್ತಿದ್ದು, ಅಕ್ಟೋಬರ್ ಹಾಗೂ ನವೆಂಬರ್ನಲ್ಲಿ ಚುನಾವಣೆ ನಡೆಯಲಿದೆ.
ಶೀಘ್ರದಲ್ಲೇ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ