Bihar: ಹನುಮಾನ್ ದೇವಾಲಯದ ಆವರಣದಲ್ಲಿ ಗೋಮಾಂಸ ಪತ್ತೆ, ಬಿಗಿ ಬಂದೋಬಸ್ತ್
Team Udayavani, Jul 22, 2023, 1:26 PM IST
ಬಿಹಾರ: ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿರುವ ಹನುಮಾನ್ ದೇವಾಲಯದ ಆವರಣದಲ್ಲಿ ಗೋಮಾಂಸ ಪತ್ತೆಯಾದ ಘಟನೆ ವರದಿಯಾಗಿದೆ.
ಘಟನೆಗೆ ಸಂಬಂಧಿಸಿ ಕೋಮು ಗಲಭೆ ನಡೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದೇವಳದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಹಾಸ್ಪುರದ ಬಾಲಾಬಿಘಾದಲ್ಲಿರುವ ಹನುಮಾನ್ ದೇಗುಲದಲ್ಲಿ ಶನಿವಾರ ಸ್ಥಳೀಯರು ಗೋಮಾಂಸವನ್ನು ಇರಿಸಿರುವುದನ್ನು ಕಂಡು ಪೊಲೀಸರಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ದೇವಸ್ಥಾನದ ಅವರದಲ್ಲಿದ್ದ ಗೋ ಮಾಂಸವನ್ನು ತೆರವುಗೊಳಿಸಿ, ಪ್ರಕರಣ ದಾಖಲಿಸಿಕೊಂಡು ಈ ಪ್ರದೇಶದಲ್ಲಿ ಕೋಮು ಸೌಹಾರ್ದತೆ ಕದಡಲು ಕೆಲವು ಸಮಾಜ ವಿರೋಧಿಗಳು ಗೋಮಾಂಸವನ್ನು ದೇವಸ್ಥಾನದೊಳಗೆ ಇಟ್ಟಿರುವ ಶಂಕೆ ವ್ಯಕ್ತವಾಗಿದೆ.
ಪೊಲೀಸರು ಸ್ಥಳೀಯರೊಂದಿಗೂ ಸಭೆ ನಡೆಸಿ, ಸಮೀಪದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿ ಸಮಾಜಘಾತುಕರನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ದೇವಸ್ಥಾನದ ಸುತ್ತ ಪೊಲೀಸ್ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ಇದನ್ನೂ ಓದಿ: Uruguay Coast: 10 ದಿನಗಳಲ್ಲಿ ಸಾವಿರಾರು ಪೆಂಗ್ವಿನ್ ಗಳ ಸಾವು…ಕಾರಣ ನಿಗೂಢ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ