ಬಿಹಾರದಲ್ಲಿ ಶೀಘ್ರವೇ ತೃತೀಯ ಲಿಂಗಿಗಳ ಬೆಟಾಲಿಯನ್‌?


Team Udayavani, Dec 27, 2020, 12:18 AM IST

ಬಿಹಾರದಲ್ಲಿ ಶೀಘ್ರವೇ ತೃತೀಯ ಲಿಂಗಿಗಳ ಬೆಟಾಲಿಯನ್‌?

ಪಟ್ನಾ: ಎಲ್ಲವೂ ಅಂದುಕೊಂಡಂತೆ ನಡೆದರೆ, ದೇಶದಲ್ಲೇ ತೃತೀಯ ಲಿಂಗಿಗಳ ಪ್ರತ್ಯೇಕ ಪೊಲೀಸ್‌ ಬೆಟಾಲಿಯನ್‌ ಹೊಂದಿರುವ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಬಿಹಾರ ಪಾತ್ರ ವಾಗಲಿದೆ. ಈವರೆಗೆ ಪೊಲೀಸ್‌ ಸೇವೆಯಲ್ಲಿ ತೃತೀಯ ಲಿಂಗಿಗಳ ನೇಮಕಕ್ಕೆ ಸಂಬಂಧಿಸಿ ರಾಜ್ಯ ಸರಕಾರಗಳು ನಿರ್ದಿಷ್ಠ ಅಥವಾ ಪ್ರತ್ಯೇಕ ನೀತಿ ಹೊಂದಿರಲಿಲ್ಲ.

ಈಗ ಬಿಹಾರ ಸರಕಾರವು ಇಂಥದ್ದೊಂದು ಕಾರ್ಯಕ್ಕೆ ಮುಂದಾಗಿದ್ದು, ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ತೃತೀಯ ಲಿಂಗಿಗಳಿಗೆಂದೇ ನಿರ್ದಿಷ್ಟ ಬೆಟಾಲಿಯನ್‌ ಅನ್ನು ರಚಿಸುವ ಬಗ್ಗೆ ಪರಿಶೀಲನೆ ಆರಂಭಿಸಿದೆ ಎಂದು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಮೀರ್‌ ಸುಭಾನಿ ಹೇಳಿದ್ದಾರೆ.

40 ಸಾವಿರ ತೃತೀಯ ಲಿಂಗಿಗಳು
ಬಿಹಾರದಲ್ಲಿ 18 ವರ್ಷ ದಾಟಿದ ಸುಮಾರು 40 ಸಾವಿರ ತೃತೀಯ ಲಿಂಗಿಗಳಿದ್ದಾರೆ. ಆದರೆ, ಈ ಪೈಕಿ ಈವರೆಗೆ ಪೊಲೀಸ್‌ ಇಲಾಖೆಗೆ ಯಾರೊಬ್ಬರೂ ನೇಮಕಗೊಂಡಿಲ್ಲ. ಈಗ ರಾಜ್ಯ ಸರಕಾರ‌ವು ಈ ನಿಟ್ಟಿನಲ್ಲಿ ಹೆಜ್ಜೆಯಿಟ್ಟಿದ್ದು, ಸರಕಾರ‌ದ ಅನುಮತಿ ದೊರೆತ ತತ್‌ಕ್ಷಣವೇ, ತೃತೀಯ ಲಿಂಗಿಗಳ ನೇಮಕಕ್ಕಿರುವ ಮಾನದಂಡಗಳು ಹಾಗೂ ಇತರ ತಾಂತ್ರಿಕ ವಿಚಾರಗಳನ್ನು ಅಂತಿಮಗೊಳಿಸಲಾಗುವುದು ಎಂದು ಎಡಿಜಿ ಜಿತೇಂದ್ರ ಕುಮಾರ್‌ ಮಾಹಿತಿ ನೀಡಿದ್ದಾರೆ.

ಹೈಕೋರ್ಟ್‌ಗೆ ಅರ್ಜಿ
ರಾಜ್ಯ ಪೊಲೀಸ್‌ ಇಲಾಖೆಗೆ 8 ಸಾವಿರ ಕಾನ್‌ಸ್ಟೆಬಲ್‌ಗ‌ಳ ನೇಮಕ ಪ್ರಕ್ರಿಯೆ ಸದ್ಯದಲ್ಲೇ ನಡೆಯಲಿದ್ದು, ಈ ಪ್ರಕ್ರಿಯೆಯಲ್ಲಿ ತೃತೀಯ ಲಿಂಗಿಗಳಿಗೂ ಪಾಲ್ಗೊಳ್ಳಲು ಅವಕಾಶ ಕಲ್ಪಿಸಬೇಕು ಎಂದು ಕೋರಿ ವೀರ ಯಾದವ್‌ ಅವರು ಪಟ್ನಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಸದ್ಯ ಆನ್‌ಲೈನ್‌ ನೇಮಕಾತಿ ಅರ್ಜಿ ಯಲ್ಲಿ “ಪುರುಷ’ ಮತ್ತು “ಮಹಿಳೆ’ ಎಂಬ 2 ಲಿಂಗಗಳ ಆಯ್ಕೆ ಗಷ್ಟೇ ಅವಕಾಶವಿದೆ. ಈ ಹಿನ್ನೆಲೆಯಲ್ಲಿ, ಅರ್ಜಿಗೆ ಸಂಬಂಧಿಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸರಕಾರ‌ಕ್ಕೆ ಹೈಕೋರ್ಟ್‌ ಸೂಚಿಸಿತ್ತು.

ಬಿಹಾರದ ಪೊಲೀಸ್‌ ಇಲಾಖೆಯಲ್ಲಿ ದೊಡ್ಡಮಟ್ಟದ ಬದಲಾವಣೆ ಆಗುತ್ತಿರುವುದು ಇದು ಮೊದಲೇನಲ್ಲ. ಕಳೆದ ಫೆಬ್ರವರಿಯಲ್ಲಿ ಇಲಾಖೆಯಲ್ಲಿ ಬುಡಕಟ್ಟು ಜನಾಂಗದ ಮಹಿಳೆ ಯರಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಮಹಿಳೆಯರಿಗೆ ಶೇ.35 ಮೀಸಲಾತಿ ಯನ್ನೂ ನೀಡಲಾಗಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.