Reels ಮಾಡುವುದನ್ನು ನಿಲ್ಲಿಸು ಎಂದಿದ್ದಕ್ಕೆ ಪ್ಲ್ಯಾನ್ ಮಾಡಿ ಪತಿಯನ್ನೇ ಮುಗಿಸಿದ ಪತ್ನಿ
Team Udayavani, Jan 9, 2024, 1:44 PM IST
ಪಾಟ್ನಾ: ರೀಲ್ಸ್ ಮಾಡಲು ಬಿಡದ್ದಕ್ಕೆ ಪತ್ನಿಯೊಬ್ಬಳು ತನ್ನ ಸಂಬಂಧಿಕರೊಂದಿಗೆ ಸೇರಿಕೊಂಡು ಪತ್ನಿಯನ್ನೇ ಕೊಲಗೈದಿರುವ ಘಟನೆ ಬಿಹಾರದ ಬೇಗುಸರಾಯ್ ನಲ್ಲಿ ನಡೆದಿದೆ.
ಭಾನುವಾರ (ಜನವರಿ 7) ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕೊಲೆಯಾದ ಮಹೇಶ್ವರ್ ಕೂಲಿ ಕೆಲಸ ಮಾಡಿಕೊಂಡಿದ್ದ.
ಫಫೌತ್ ಗ್ರಾಮದವರಾದ ರಾಣಿ ಕುಮಾರಿ ಸುಮಾರು 6 ರಿಂದ 7 ವರ್ಷಗಳ ಹಿಂದೆ ಮಹೇಶ್ವರ್ ಅವರನ್ನು ವಿವಾಹವಾಗಿದ್ದರು. ಕೋಲ್ಕತ್ತಾದಲ್ಲಿ ಕೂಲಿ ಕೆಲಸ ಮಾಡಿಕೊಂಡು ಇರುತ್ತಿದ್ದ ಮಹೇಶ್ವರ್ ಇತ್ತೀಚೆಗೆ ತನ್ನ ಅತ್ತೆಯ ಮನೆಯಿರುವ ಫಪೌತ್ ಗೆ ಬಂದಿದ್ದರು. ಈ ವೇಳೆ ಪತ್ನಿ ರಾಣಿ ಕುಮಾರಿ ಹಾಗೂ ಪತಿ ಮಹೇಶ್ವರ್ ನಡುವೆ ಜಗಳ ನಡೆದಿದೆ.
ಇದನ್ನೂ ಓದಿ: Crime: ದಿನ ರೀಲ್ಸ್ ಮಾಡುತ್ತಿದ್ದಕ್ಕೆ ಪತ್ನಿ,ಮಗುವನ್ನು ಕೊಂದು ದರೋಡೆ ಕಥೆ ಕಟ್ಟಿದ ಪತಿ
ಪತ್ನಿ ರೀಲ್ಸ್ ಮಾಡುತ್ತಿದ್ದದ್ದು ಪತಿ ಮಹೇಶ್ವರ್ ಇಷ್ಟವಿರಲಿಲ್ಲ. ಈ ವಿಚಾರದಲ್ಲಿ ಇಬ್ಬರ ನಡುವೆ ಆಗಾಗ ಕಲಹ ನಡೆಯುತ್ತಿತ್ತು. ರೀಲ್ಸ್ ಮಾಡಬೇಡ ಎಂದಿದ್ದಕ್ಕೆ ಶುರುವಾದ ಜಗಳದಿಂದ ಆಕ್ರೋಶಗೊಂಡ ಪತ್ನಿ ತನ್ನ ಸಹೋದರ ಸಂಬಂಧಿಗಳೊಂದಿಗೆ ಸೇರಿಕೊಂಡು ಪತಿಯನ್ನು ಕೊಲೆಗೈದಿದ್ದಾರೆ.
ಮಹೇಶ್ವರ್ ಅವರ ತಮ್ಮ ಮೊಬೈಲ್ ಕರೆ ಮಾಡಿದ ಬಳಿಕ ಯಾರೋ ಬೇರೊಬ್ಬರು ಕರೆಯನ್ನು ಸ್ವೀಕರಿಸಿದ ವೇಳೆ ಕೃತ್ಯ ಬೆಳಕಿಗೆ ಬಂದಿದೆ. ಮಹೇಶ್ವರ್ ಅವರ ಸಹೋದರ ಕೂಡಲೇ ಫಿಫೌತ್ಗೆ ತೆರಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಪತ್ನಿ ಹಾಗೂ ಅವರ ಸಂಬಂಧಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ