ಗಂಡನನ್ನು ತೊರೆದು ಪ್ರೀತಿಸಿದವನ ಜೊತೆ ರೈಲಿನಲ್ಲಿ ಮದುವೆಯಾದ ಯುವತಿ
Team Udayavani, Jun 13, 2021, 3:08 PM IST
ಪಾಟ್ನಾ: ಯುವ ಪ್ರೇಮಿಗಳಿಬ್ಬರು ಚಲಿಸುತ್ತಿದ್ದ ರೈಲಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಘಟನೆ ಬಿಹಾರಿನಲ್ಲಿ ನಡೆದಿದೆ.
ಬಿಹಾರದ ಸುಲ್ತಾನ್ಗಂಜ್ ಪ್ರದೇಶದ ಭಿರ್ ಕುರ್ದ್ ಎಂಬ ಗ್ರಾಮದ ನಿವಾಸಿ ಆಶು ಕುಮಾರ್ ಹಾಗೂ ಅನು ಕುಮಾರಿ ಹೀಗೆ ವಿಭಿನ್ನವಾಗಿ ಮದುವೆಯಾದ ಪ್ರೇಮ ಪಕ್ಷಿಗಳು. ಹಲವು ವರ್ಷಗಳಿಂದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಚಾರ ಹುಡುಗಿ ಮನೆಯವರಿಗೆ ಗೊತ್ತಾಗಿತ್ತು. ಹೀಗಾಗಿ ತರಾತುರಿಯಲ್ಲಿ ಕಿರಣಪುರ್ ಹಳ್ಳಿಯ ಬೇರೊಬ್ಬನ ಜೊತೆ ಕಳೆದ ಎರಡು ತಿಂಗಳ ಹಿಂದ ಮದುವೆ ಮಾಡಿದ್ದರು. ತನ್ನ ಇಷ್ಟದ ವಿರುದ್ಧ ನಡೆದ ಮದುವೆ ಧಿಕ್ಕರಿಸಿದ ಅನುಕುಮಾರಿ ತನ್ನ ಪ್ರಿಯತಮನೊಂದಿಗೆ ಮನೆ ಬಿಟ್ಟು ಓಡಿ ಬಂದಿದ್ದಾಳೆ.
ಆಶು ಕುಮಾರ್ ಹಾಗೂ ಆಕೆ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ ಮದುವೆಯಾಗಿದ್ದಾರೆ. ಇವರ ಮ್ಯಾರೇಜಿನ ಫೋಟೋಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
ಈ ಘಟನೆ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಅಶು ಕುಮಾರ್, ನಾವು ಊರಲ್ಲೇ ಇದ್ದರೆ ಮನೆಯವರು ಸುಮ್ಮನಿರುವುದಿಲ್ಲ ಎಂದು ಬೆಂಗಳೂರಿಗೆ ಹೋಗಲು ನಿರ್ಧರಿಸಿದೆವು. ರೈಲಿನಲ್ಲಿ ತನಗೆ ತಾಳಿ ಕಟ್ಟುವಂತೆ ಅನು ಬಹಳ ಒತ್ತಾಯ ಮಾಡಿದಳು. ಹೀಗಾಗಿ, ಆಕೆಯ ಹಣೆಗೆ ಕುಂಕುಮವಿಟ್ಟು ರೈಲಿನೊಳಗೆ ಮದುವೆಯಾದೆ ಎಂದು ತಿಳಿಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ