
ಸರಕಾರಿ ಭೂಮಿಯಲ್ಲಿ ಸ್ಮಾರಕ ನಿರ್ಮಾಣ: ಹುತಾತ್ಮ ಯೋಧನ ತಂದೆಯನ್ನು ಥಳಿಸಿ ಬಂಧಿಸಿದ ಪೊಲೀಸರು
Team Udayavani, Feb 28, 2023, 4:36 PM IST

ಬಿಹಾರ: ಸರಕಾರಿ ಭೂಮಿಯಲ್ಲಿ ಹುತಾತ್ಮ ಯೋಧನ ಸ್ಮಾರಕ ನಿರ್ಮಾಣ ಮಾಡಿದ ಕಾರಣಕ್ಕೆ ಬಿಹಾರ ಪೊಲೀಸರು ಹುತಾತ್ಮ ಯೋಧನ ತಂದೆಯನ್ನು ಥಳಿಸಿ ಬಂಧಿಸಿದ ಘಟನೆ ನಡೆದಿದೆ.
2020 ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರ ವಿರುದ್ಧ ಹೋರಾಡಿ ಪ್ರಾಣ ತ್ಯಾಗ ಮಾಡಿದ ಸೇನಾಧಿಕಾರಿ ಜೈ ಕಿಶೋರ್ ಸಿಂಗ್ ಅವರ ನೆನಪಿಗಾಗಿ ತಂದೆ ಬಿಹಾರದ ವೈಶಾಲಿಯ ಹಳ್ಳಿಯೊಂದರ ಸರಕಾರಿ ಭೂಮಿಯಲ್ಲಿ ಸ್ಮಾರಕ ನಿರ್ಮಿಸಿದ್ದಾರೆ.
ಈ ವಿಚಾರ ಗೊತ್ತಾಗುತ್ತಿದ್ದಂತೆ ಕೆರಳಿದ ಬಿಹಾರ ಪೊಲೀಸರು ಹುತಾತ್ಮ ಯೋಧನ ತಂದೆಯ ವಿರುದ್ಧ ಸರಕಾರಿ ಭೂಮಿಯಲ್ಲಿ ಅಕ್ರಮವಾಗಿ ಸ್ಮಾರಕ ನಿರ್ಮಾಣ ಮಾಡಿರುವ ಕುರಿತು ಪ್ರಕರಣ ದಾಖಲಿಸಿಕೊಂಡು ಹುತಾತ್ಮ ಯೋಧನ ತಂದೆಯನ್ನು ಥಳಿಸಿ ಠಾಣೆಗೆ ಎಳೆದೊಯ್ದಿದ್ದಾರೆ.
ಶನಿವಾರ ಮಧ್ಯರಾತ್ರಿ ಹುತಾತ್ಮ ಯೋಧನ ತಂದೆಯನ್ನು ಪೊಲೀಸರು ಎಳೆದೊಯ್ದಿದ್ದು ಠಾಣೆಗೆ ಕರೆದೊಯ್ದಿರುವ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:ಕಾಶ್ಮೀರ: ಭದ್ರತಾ ಪಡೆಯಿಂದ ಮತ್ತೋರ್ವ ಉಗ್ರನ ಎನ್ ಕೌಂಟರ್, ಕಾರ್ಯಾಚರಣೆ ಮುಂದುವರಿಕೆ
ಘಟನೆ ವಿವರ: ರಾಜ್ ಕಪೂರ್ ಸಿಂಗ್ ಅವರು ಕಳೆದ ವರ್ಷದ ಫೆಬ್ರವರಿ 24 ರಂದು ವೈಶಾಲಿ ಜಿಲ್ಲೆಯ ಜಂಡಹಾ ಪೊಲೀಸ್ ಠಾಣೆ ವ್ಯಾಪ್ತಿಯ ಕಜ್ರಿ ಬುಜುರ್ಗ್ ಎಂಬ ಹಳ್ಳಿಯಲ್ಲಿ ತಮ್ಮ ಮಗನ ನೆನಪಿಗಾಗಿ ಸ್ಮಾರಕವನ್ನು ನಿರ್ಮಿಸಿದ್ದರು. ಸ್ಮಾರಕ ಉದ್ಘಾಟನೆ ಸಂದರ್ಭದಲ್ಲಿ ಹಲವಾರು ಸ್ಥಳೀಯ ಸರ್ಕಾರಿ ಅಧಿಕಾರಿಗಳು ಸಹ ಸಮಾರಂಭದಲ್ಲಿ ಭಾಗವಹಿಸಿದ್ದರು.
ಉದ್ಘಾಟನೆಗೊಂಡ ಕೆಲವೇ ದಿನಗಳ ಬಳಿಕ ಇದು ಬೇರೆಯವರಿಗೆ ಸೇರಿದ ಜಾಗವಾಗಿತ್ತು ಎಂದು ತಿಳಿದುಬಂದಿದೆ, ಅಲ್ಲದೆ ಸ್ಮಾರಕ ನಿರ್ಮಾಣ ಮಾಡಲು ಭೂ ಮಾಲೀಕನ ಅನುಮತಿಯನ್ನು ಪಡೆದಿರಲಿಲ್ಲ, ಅಷ್ಟು ಮಾತ್ರವಲ್ಲದೆ ಪ್ರತಿಮೆ ಸುತ್ತ ಗೋಡೆ ಕಟ್ಟಲು ಅಣಿಯಾಗುತ್ತಿದ್ದ ವಿಚಾರ ಗೊತ್ತಾಗುತ್ತಿದ್ದಂತೆ ನೆರೆಕರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಹುತಾತ್ಮ ಯೋಧನ ತಂದೆಯನ್ನು ಥಳಿಸಿ ಬಂಧಿಸಿದ್ದಾರೆ, ಈ ಕುರಿತು ಹೇಳಿಕೆ ನೀಡಿರುವ ಪೊಲೀಸ್ ಅಧಿಕಾರಿ ಸರಕಾರಿ ಭೂಮಿಯಲ್ಲಿ ಪ್ರತಿಮೆ ನಿರ್ಮಾಣ ಮಾಡಲು ಅವಕಾಶವಿಲ್ಲ ಅಲ್ಲದೆ ಸರಕಾರಕ್ಕೆ ಮನವಿ ಮಾಡಿದ್ದಾರೆ ಸರಕಾರವೇ ಪ್ರತಿಮೆ ನಿರ್ಮಾಣ ಮಾಡಲು ಸರಕಾರಿ ಭೂಮಿ ನೀಡುತಿತ್ತು ಅದರ ಬದಲಿಗೆ ಉರುನಲ್ಲಿದ್ದ ಸರಕಾರಿ ಭೂಮಿಯಲ್ಲಿ ಅನುಮತಿ ಪಡೆಯದೇ ಪ್ರತಿಮೆ ನಿರ್ಮಾಣ ಮಾಡಿರುವುದು ಅಪರಾಧ ಎಂದು ಹೇಳಿದ್ದಾರೆ.
ರಾಜ್ ಕಪೂರ್ ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆ ಐಪಿಸಿ ಸೆಕ್ಷನ್ 188, 323, 504 ಮತ್ತು 506 ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ವಿವಿಧ ಸೆಕ್ಷನ್‌ಗಳನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?