ಮೋದಿ ಪ್ರಮಾಣಕ್ಕೆ ಬಿಮ್‌ಸ್ಟೆಕ್‌ ಬಲ

Team Udayavani, May 28, 2019, 6:00 AM IST

ಹೊಸದಿಲ್ಲಿ: ಇದೇ 30ರಂದು ರಾತ್ರಿ 7 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಈ ಬಾರಿ ಬಿಮ್‌ಸ್ಟೆಕ್‌ ಸದಸ್ಯ ರಾಷ್ಟ್ರಗಳ ಮುಖ್ಯಸ್ಥರಿಗೆ ಆಹ್ವಾನ ನೀಡಲಾಗಿದೆ. ಬಿಮ್‌ಸ್ಟೆಕ್‌ನಲ್ಲಿ ಬಾಂಗ್ಲಾದೇಶ, ಮ್ಯಾನ್ಮಾರ್‌, ಶ್ರೀಲಂಕಾ, ಥಾಯ್ಲೆಂಡ್‌, ನೇಪಾಲ, ಭೂತಾನ್‌, ಭಾರತವು ಸದಸ್ಯ ರಾಷ್ಟ್ರಗಳಾಗಿವೆ.

ಕೇಂದ್ರ ಸರಕಾರದ “ನೆರೆರಾಷ್ಟ್ರಗಳೇ ಮೊದಲು’ ಎಂಬ ನೀತಿಗೆ ಅನುಸಾರವಾಗಿ ಈ ರಾಷ್ಟ್ರಗಳ ನಾಯಕರನ್ನು ಪ್ರಧಾನಿ ಮೋದಿ, ಸಂಪುಟ ಸಚಿವರ ಪದಗ್ರಹಣ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಇವರಲ್ಲದೆ ಶಾಂಘೈ ಸಹಕಾರ ಸಂಸ್ಥೆಯ ಮುಖ್ಯಸ್ಥ, ಕಿರ್ಗಿಝ್ ರಿಪಬ್ಲಿಕ್‌ನ ಅಧ್ಯಕ್ಷರು, ಪ್ರಸಕ್ತ ವರ್ಷದ ಪ್ರವಾಸಿ ಭಾರತೀಯ ದಿವಸ್‌ನ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮಾರಿಷಿಯಸ್‌ ಪ್ರಧಾನಮಂತ್ರಿಗೂ ಆಹ್ವಾನ ನೀಡಲಾಗಿದೆ ಎಂದು ಸರಕಾರದ ಅಧಿಕೃತ ವಕ್ತಾರರು ತಿಳಿಸಿದ್ದಾರೆ. 2014ರಲ್ಲಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮೋದಿ ಪಾಕಿಸ್ಥಾನದ ಅಂದಿನ ಪ್ರಧಾನಿ ನವಾಜ್‌ ಶರೀಫ್ ಸಹಿತ ಸಾರ್ಕ್‌ ರಾಷ್ಟ್ರಗಳ ನಾಯಕರನ್ನು ಆಹ್ವಾನಿಸಿದ್ದರು.

ಹಸೀನಾ ಗೈರು?: ಬಾಂಗ್ಲಾ ಪ್ರಧಾನಿ ಶೇಖ್‌ ಹಸೀನಾ ಅವರು ವಿದೇಶ ಪ್ರವಾಸದಲ್ಲಿರುವ ಕಾರಣ, ಅವರು ಮೋದಿಯವರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಲಾಗಿದೆ. ಅವರ ಬದಲಿಗೆ ಸಚಿವ ಎಕೆಎಂ ಮೊಜಮ್ಮಿಲ್‌ ಹಖ್‌ ಅವರು ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ಕಳೆದ ಬಾರಿಯೂ ಹಸೀನಾ ಅವರು ವಿದೇಶ ಪ್ರವಾಸದ ನಿಮಿತ್ತ ಮೋದಿ ಪ್ರಮಾಣ ಕಾರ್ಯಕ್ರಮದಲ್ಲಿ ಭಾಗಿಯಾಗಿರಲಿಲ್ಲ.

ರಜನಿ, ಕಮಲ್‌ಗ‌ೂ ಆಹ್ವಾನ: ಈ ನಡುವೆ ತಮಿಳುನಾಡಿನ ಟಾಪ್‌ ಸಿನೆಮಾ ಸ್ಟಾರ್‌ಗಳಾದ ರಜನಿಕಾಂತ್‌ ಹಾಗೂ ಕಮಲ್‌ ಹಾಸನ್‌ ಅವರಿಗೂ ಮೇ 30ರ ಕಾರ್ಯಕ್ರಮಕ್ಕೆ ಆಹ್ವಾನ ಒದಗಿ ಸಲಾಗಿದೆ. ಆದರೆ ಇವರಿಬ್ಬರೂ ಪಾಲ್ಗೊಳ್ಳುವುದು ಇನ್ನೂ ಖಚಿತವಾಗಿಲ್ಲ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ