Bird flu: 9ತಿಂಗಳ ಮಗುವಿಗೆ ಹಕ್ಕಿ ಜ್ವರ… ಜ್ವರ, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಗು
Team Udayavani, Aug 19, 2023, 11:49 AM IST
ಜಾರ್ಖಂಡ್: ಇಲ್ಲಿನ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಒಂಬತ್ತು ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆಯಾಗಿದೆ ಎಂದು ಹಿರಿಯ ವೈದ್ಯರು ಶುಕ್ರವಾರ ತಿಳಿಸಿದ್ದಾರೆ.
ಜ್ವರ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಗುವನ್ನು ಜಾರ್ಖಂಡ್ನ ರಾಮಗಢ ಜಿಲ್ಲೆಯ ನಿವಾಸಿಯೊಬ್ಬರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಗುವಿನ ಮೂಗಿನ ಸ್ವ್ಯಾಬ್ ಅನ್ನು ಜೆನೆಟಿಕ್ಸ್ ಮತ್ತು ಜಿನೋಮಿಕ್ಸ್ ವಿಭಾಗಕ್ಕೆ ಕಳುಹಿಸಲಾಗಿದ್ದು, ಇದರ ವರದಿಯಲ್ಲಿ ಮಗುವಿನಲ್ಲಿ ಹಕ್ಕಿಜ್ವರದ ಲಕ್ಷಣಗಳು ದೃಢಪಟ್ಟಿದೆ ಎಂದು ಮಕ್ಕಳ ವಿಭಾಗದ ಡಾ.ರಾಜೀವ್ ಮಿಶ್ರಾ ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ವರ್ಷದ ಮೊದಲ ಹಕ್ಕಿ ಜ್ವರ ಪ್ರಕರಣ ಇದಾಗಿದ್ದು ಮಗುವಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಈ ಸಂದರ್ಭದಲ್ಲಿ ಕೋವಿಡ್ ಮಾದರಿಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ ಮತ್ತು ಮಗುವನ್ನು ಇತರರಿಂದ ಪ್ರತ್ಯೇಕಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಿಶ್ರಾ ಹೇಳಿದರು.
ಇದನ್ನೂ ಓದಿ: Leopard: ಬಿಕ್ಕೋನಹಳ್ಳಿಯ ಮಹಿಳೆಯನ್ನು ಕೊಂದ ಚಿರತೆ ಕೊನೆಗೂ ಸೆರೆ, ನಿಟ್ಟುಸಿರು ಬಿಟ್ಟ ಜನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ