ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು; ಮುಖ್ಯಮಂತ್ರಿ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ
ಕಾಂಗ್ರೆಸ್ ಪಕ್ಷದಿಂದ ಬಂಡಾಯ ಎದ್ದು 22 ಶಾಸಕರು ರಾಜೀನಾಮೆ ನೀಡಿದ್ದರಿಂದ ಮಧ್ಯಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿತ್ತು.
Team Udayavani, Mar 20, 2020, 12:42 PM IST
ನವದೆಹಲಿ:ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬಹುಮತ ಸಾಬೀತುಪಡಿಸುವ ಮುನ್ನವೇ ಮಧ್ಯಪ್ರದೇಶ ಮುಖ್ಯಮಂತ್ರಿ ಸ್ಥಾನಕ್ಕೆ ಕಮಲ್ ನಾಥ್ ಶುಕ್ರವಾರ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಬಂಡಾಯ ಎದ್ದು 22 ಶಾಸಕರು ರಾಜೀನಾಮೆ ನೀಡಿದ್ದರಿಂದ ಮಧ್ಯಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಏತನ್ಮಧ್ಯೆ ರಾಜ್ಯಪಾಲರು ಬಹುಮತ ಸಾಬೀತುಪಡಿಸುವಂತೆ ಕಮಲ್ ನಾಥ್ ಸರ್ಕಾರಕ್ಕೆ ಸೂಚಿಸಿದ್ದರು.
ಆದರೆ ಬಜೆಟ್ ಅಧಿವೇಶನವನ್ನು ಸ್ಪೀಕರ್ ಪ್ರಜಾಪತಿ ಅವರು ಕೋವಿಡ್-19 ವೈರಸ್ ಭೀತಿಯ ನೆಪವೊಡ್ಡಿ ಬಹುಮತ ಸಾಬೀತುಪಡಿಸಲು ಆದೇಶ ನೀಡದೆ ಕಲಾಪ ಮುಂದೂಡಿದ್ದರು. ಇದರಿಂದ ಅಸಮಾಧಾನಗೊಂಡ ಬಿಜೆಪಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.
ಶುಕ್ರವಾರ ಸಂಜೆ 5ಗಂಟೆಯೊಳಗೆ ಬಹುಮತ ಸಾಬೀತುಪಡಿಸುವಂತೆ ಸುಪ್ರೀಂಕೋರ್ಟ್ ಮಧ್ಯಪ್ರದೇಶ ಮುಖ್ಯಮಂತ್ರಿ ಕಲಮ್ ನಾಥ್ ಗೆ ಸೂಚನೆ ನೀಡಿತ್ತು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಮಲ್ ನಾಥ್, ರಾಜೀನಾಮೆ ನೀಡಿರುವುದಾಗಿ ಘೋಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಯೋತ್ಪಾದನೆಗೆ ಹಣಕಾಸು ನೆರವು ಪ್ರಕರಣ: ಯಾಸಿನ್ ಮಲಿಕ್ ಗೆ ಜೀವಾವಧಿ ಶಿಕ್ಷೆ
ಗೋವಾದಲ್ಲಿ ಸನ್ಬರ್ನ್ ಫೆಸ್ಟಿವಲ್ ಆಯೋಜನೆಗೆ ಅವಕಾಶವಿಲ್ಲ : ಸಚಿವ ಖಂವಟೆ
ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ 3 ಪಾಕಿಸ್ತಾನಿ ಉಗ್ರರ ಹತ್ಯೆ, ಓರ್ವ ಪೊಲೀಸ್ ಹುತಾತ್ಮ
ಭದ್ರತಾಲೋಪ? ತಮಿಳುನಾಡಿನಲ್ಲಿ ಬಿಜೆಪಿ ಮುಖಂಡನ ಹತ್ಯೆ, ಎಐಡಿಎಂಕೆ ಆಕ್ರೋಶ
ಮತ್ತೊಂದು ಶಾಕ್: ಹಿರಿಯ ನಾಯಕ ಕಪಿಲ್ ಸಿಬಲ್ ಕಾಂಗ್ರೆಸ್ ಗೆ ಗುಡ್ ಬೈ, ಎಸ್ಪಿ ಬೆಂಬಲ