ಬಿಹಾರ: 2ದಿನದ ಹಿಂದೆ ಪಕ್ಷಕ್ಕೆ ಸೇರ್ಪಡೆ- ಬಿಜೆಪಿ ಮುಖಂಡ ಗುಂಡಿನ ದಾಳಿಗೆ ಸಾವು
ಕೇವಲ ಎರಡು ದಿನದ ಹಿಂದಷ್ಟೇ ರಾಜು ಬಾಬಾ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.
Team Udayavani, Oct 1, 2020, 12:12 PM IST
ಪಾಟ್ನಾ:ಕೆಲವು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಭಾರತೀಯ ಜನತಾಪಕ್ಷದ ಜಯಂತ್ ಮಂಡಲ್ ಉಪಾಧ್ಯಕ್ಷ ರಾಜೇಶ್ ಕುಮಾರ್ ಅಲಿಯಾಸ್ ರಾಜು ಬಾಬಾ ಎಂಬವರನ್ನು ಹತ್ಯೆಗೈದಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ಗುರುವಾರ ಬೆಳಗ್ಗೆ ನಡೆದಿರುವುದಾಗಿ ವರದಿ ತಿಳಿಸಿದೆ.
ತೇಜ್ ಪ್ರತಾಪ್ ನಗರದ ಬೌರ್ ಪೊಲೀಸ್ ಠಾಣಾ ವ್ಯಾಪ್ತಿಯ ಸೀತಾರಾಮ್ ಉತ್ಸವ್ ಹಾಲ್ ಸಮೀಪ ರಾಜು ಬಾಬಾ ಅವರನ್ನು ಎರಡು ಬೈಕ್ ನಲ್ಲಿ ಬಂದಿದ್ದ ಮುಸುಕುಧಾರಿ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ವರದಿ ವಿವರಿಸಿದೆ.
ಕೇವಲ ಎರಡು ದಿನದ ಹಿಂದಷ್ಟೇ ರಾಜು ಬಾಬಾ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಮುಂಜಾನೆಯ ವಾಯುವಿಹಾರಕ್ಕೆ ಹೊರಟಿದ್ದ ಸಂದರ್ಭದಲ್ಲಿ ಗುಂಡಿಟ್ಟು ಹತ್ಯೆಗೈಯಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ತನಿಖೆಯನ್ನು ಆರಂಭಿಸಿದ್ದಾರೆ. ಹಂತಕರ ಪತ್ತೆಗಾಗಿ ಪಾಟ್ನಾ ಪೊಲೀಸರು ಸಿಸಿಟಿವಿ ಫೂಟೇಜ್ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು