BJP ಸಂಸದ ಓಂ ಬಿರ್ಲಾ ಲೋಕಸಭಾ ಸ್ಪೀಕರ್ ಆಗಿ ಅವಿರೋಧ ಆಯ್ಕೆ, PM ಮೋದಿ ಅಭಿನಂದನೆ
Team Udayavani, Jun 19, 2019, 11:58 AM IST
ಹೊಸದಿಲ್ಲಿ : ಭಾರತೀಯ ಜನತಾ ಪಕ್ಷದ ಸಂಸದ ಓಂ ಬಿರ್ಲಾ ಅವರು 17ನೇ ಲೋಕಸಭೆಯ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ಬುಧವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ, ಬಿರ್ಲಾ ಅವರ ಉಮೇದ್ವಾರಿಕೆಯನ್ನು ಬೆಂಬಲಿಸಿತು.
ಬಿರ್ಲಾ ಅವರು ರಾಜಸ್ಥಾನದ ಕೋಟ ಕ್ಷೇತ್ರದಿಂದ ಎರಡು ಬಾರಿ ಸಂಸತ್ತಿಗೆ ಗೆದ್ದು ಬಂದವರಾಗಿದ್ದಾರೆ. ಇವರು 2019ರ ಲೋಕಸಭಾ ಚುನಾವಣೆಯಲ್ಲಿ ಕೋಟ ಕ್ಷೇತ್ರದಲ್ಲಿನ ತಮ್ಮ ನಿಕಟ ಪ್ರತಿಸ್ಪರ್ಧಿ ಕಾಂಗ್ರೆಸ್ ನ ರಾಮನಾರಾಯಣ ಮೀಣ ಅವರನ್ನು 2.5 ಲಕ್ಷ ಮತಗಳಿಂದ ಪರಾಭವಗೊಳಿಸಿದ್ದರು.
ಬಿರ್ಲಾ ಅವರು ಲೋಕಸಭಾ ಸ್ಪೀಕರ್ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾದೊಡನೆಯೇ ಇವರ ಹೆಸರನ್ನು ಈ ಹುದ್ದೆಗೆ ಸೂಚಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದರು.
‘ಓಂ ಬಿರ್ಲಾ ಜೀ ಅವರು ಅವಿರೋಧವಾಗಿ ಲೋಕಸಭಾ ಸ್ಪೀಕರ್ ಹುದ್ದೆಗೆ ಆಯ್ಕೆಯಾಗಿರುವುದು ನಮಗೆಲ್ಲ ಹೆಮ್ಮೆಯ ಸಂಗತಿ. ನಾವೆಲ್ಲ ಅವರನ್ನು ಅಭಿನಂದಿಸುತ್ತೇವೆ. ಅನೇಕ ಸಂಸದರಿಗೆ ಬಿರ್ಲಾ ಜೀ ಯಾರೆಂದು ಗೊತ್ತಿದೆ. ರಾಜಸ್ಥಾನದಲ್ಲಿ ಅವರು ಉತ್ತಮ ಸೇವೆ ಸಲ್ಲಿಸಿದ್ದಾರೆ’ ಎಂದು ಮೋದಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!