ಗುಜರಾತ್ನಲ್ಲಿ ನಮಗೆ ಸೋಲಾಗಲಿದೆ: ಬಿಜೆಪಿ ಸಂಸದ !
Team Udayavani, Dec 17, 2017, 10:08 AM IST
ಮುಂಬಯಿ: ಗುಜರಾತ್ ವಿಧಾನಸಭಾ ಚುನಾವಣಾ ಫಲಿತಾಂಶವನ್ನು ದೇಶವೇ ಎದುರುನೋಡುತ್ತಿರುವ ವೇಳೆ ಬಿಜೆಪಿ ರಾಜ್ಯಸಭಾ ಸದಸ್ಯ ಸಂಜಯ್ ಕಾಕಡೆ ಅವರು ‘ನಮ್ಮ ಪಕ್ಷ ಸೋಲು ಅನುಭವಿಸಲಿದೆ’ ಎಂದು ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ.
ಸಂಜಯ್ ಕಾಕಡೆ ಪ್ರಕಾರ ‘ಆಡಳಿತ ವಿರೋಧಿ ಅಲೆ ಕೆಲಸ ಮಾಡಲಿದ್ದು, ಪಕ್ಷ ಸೋಲುತ್ತದೆ. ಮಾತ್ರವಲ್ಲದೆ ಮುಸ್ಲಿಮರು ನಮ್ಮ ಸರ್ಕಾರದ ವಿರುದ್ಧ ಅಸಮಧಾನ ಹೊಂದಿದ್ದು ಪರಿಣಾಮ ಬೀರಲಿದೆ’ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
‘ನರೇಂದ್ರ ಮೋದಿ ಅವರು ಪ್ರಧಾನಿಯಾದಾಗಿನಿಂದ ಗುಜರಾತ್ ಸಮಸ್ಯೆಗಳ ಬಗ್ಗೆ ಗಮನವನ್ನೇ ಹರಿಸಲಿಲ್ಲ. ಬಿಜೆಪಿ ಸರಿಯಾಗಿ ಚುನಾವಣಾ ಪ್ರಚಾರವನ್ನೂ ಮಾಡಲಿಲ್ಲ, ಹೀಗಾಗಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ’ ಎಂದೂ ಕಾಕಡೆ ಹೇಳಿದ್ದಾರೆ.
ಚುನಾವಣೋತ್ತರ ಸಮೀಕ್ಷೆಗಳ ಪೈಕಿ 6 ಪ್ರಮುಖ ಸಮೀಕ್ಷೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದಾಗಿ ಹೇಳಲಾಗಿದೆ.
ಕಾಕಡೆ ಮೊದಲು ಪಕ್ಷೇತರರಾಗಿ ರಾಜ್ಯಸಭೆಗೆ ಆಯ್ಕೆಯಾಗಿ ಬಳಿಕ ಬಿಜೆಪಿ ಸೇರ್ಪಡೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್