ಜುಲೈ 12 ಮತ್ತು 13 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಗೋವಾ ಭೇಟಿ
Team Udayavani, Jul 10, 2021, 5:56 PM IST
ಪಣಜಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ರವರು ಜುಲೈ 12 ಮತ್ತು 13 ರಂದು ಎರಡು ದಿನಗಳ ಕಾಲ ಗೋವಾಕ್ಕೆ ಭೇಟಿ ನೀಡಲಿದ್ದು ಅವರು ಪಕ್ಷದ ಸಂಘಟನೆಯ ವಿವಿಧ ಸಮಿತಿಯೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ ಮಾಹಿತಿ ನೀಡಿದರು.
ಪಣಜಿಯ ಬಿಜೆಪಿ ಕಛೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು- ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ರವರು ಜಿಲ್ಲಾ ಸಮಿತಿ, ಶಾಸಕಾಂಗ ಪಕ್ಷ, ಸೇರಿದಂತೆ ಸರಣಿ ಸಭೆ ನಡೆಸಲಿದ್ದಾರೆ. ಎರಡು ದಿನಗಳ ಭೇಟಿ ಮುಕ್ತಾಯಗೊಳಿಸುವ ಮುನ್ನ ಮಾಧ್ಯಮಗಳಿಗೆ ಮಾಹಿತಿ ನೀಡಲಿದ್ದಾರೆ ಎಂದು ಸದಾನಂದ ತಾನಾವಡೆ ಮಾಹಿತಿ ನೀಡಿದರು.
ಇದನ್ನೂ ಓದಿ: ಕೇಂದ್ರ ಸಂಪುಟ: 33 ಸಚಿವರ ವಿರುದ್ಧ ಕ್ರಿಮಿನಲ್ ಕೇಸ್, 70 ಸಚಿವರು ಕೋಟ್ಯಧೀಶ್ವರರು!
ಪಕ್ಷವು ಟಿಕೆಟ್ ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಪಕ್ಷ ಸಂಘಟನೆ ಬಲಪಡಿಸುವತ್ತ ಗಮನಹರಿಸಲಾಗಿದೆ. ಮುಂಬರುವ ಗೋವಾ ವಿಧಾನಸಭಾ ಚುನಾವಣೆಯನ್ನು ಪಕ್ಷವು ಸ್ವತಂತ್ರವಾಗಿ ಗೆಲವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ ವಿಶ್ವಾಸ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ದಕ್ಷಿಣ ಗೋವಾ ಮಾಜಿ ಸಂಸದ ನರೇಂದ್ರ ಸಾವೈಕರ್ ಉಪಸ್ಥಿತರಿದ್ದರು.