ಮೋದಿ 2.0 ಕ್ಯಾಬಿನೆಟ್; ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಅಮಿತ್ ಶಾ
Team Udayavani, Jun 1, 2019, 2:26 PM IST
ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2ನೇ ಅವಧಿಯ ಕೇಂದ್ರ ಸರ್ಕಾರದಲ್ಲಿ ಅಮಿತ್ ಶಾ ಮೊದಲ ಬಾರಿಗೆ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಎರಡು ದಿನಗಳ ಬಳಿಕ ಶನಿವಾರ ಗೃಹ ಸಚಿವರಾಗಿ ಅಧಿಕಾರವಹಿಸಿಕೊಳ್ಳುವ ಕಾರ್ಯನಿರ್ವಹಿಸಲು ಆರಂಭಿಸಿದ್ದಾರೆ.
54ವರ್ಷದ ಅಮಿತ್ ಶಾ ಬಿಳಿ ಬಣ್ಣದ ಕುರ್ತಾ ಮೇಲೆ ತಿಳಿ ನೀಲಿ ಬಣ್ಣದ ಜಾಕೆಟ್ ಧರಿಸಿದ್ದರು. ಇಂದು ಸಂಸತ್ ನ ಉತ್ತರ ಬ್ಲಾಕ್ ನಲ್ಲಿರುವ ಕೊಠಡಿಗೆ ತೆರಳಿದ್ದರು. ಶಾ ಅವರನ್ನು ಕೇಂದ್ರ ಗೃಹ ಖಾತೆಯ ಕಾರ್ಯದರ್ಶಿ ರಾಜೀವ್ ಗೌಬಾ ಮತ್ತು ಇತರ ಅಧಿಕಾರಿಗಳು ಸ್ವಾಗತಿಸಿ ಬರಮಾಡಿಕೊಂಡಿದ್ದರು.
ರಾಜ್ ನಾಥ್ ಸಿಂಗ್ ಅವರ ಕೈಯಲ್ಲಿದ್ದ ಗೃಹ ಸಚಿವಾಲಯದ ಅಧಿಕಾರ ಇದೀಗ ಶಾ ಅವರಿಗೆ ಹಸ್ತಾಂತರವಾಗಿದೆ. ಪ್ರಸ್ತುತ ಕ್ಯಾಬಿನೆಟ್ ನಲ್ಲಿ ರಾಜ್ ನಾಥ್ ಸಿಂಗ್ ರಕ್ಷಣಾ ಸಚಿವರಾಗಿದ್ದಾರೆ. ನೂತನ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಅಮಿತ್ ಶಾ ಅವರು ಹಲವಾರು ಕಠಿಣ ಹಾಗೂ ಹೊಸ ರೂಪರೇಶೆಯನ್ನು ನೀಡಲಿದ್ದಾರೆ ಎಂದು ವರದಿ ವಿಶ್ಲೇಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ