ಬಿಜೆಪಿ ಮಹಿಳಾ ಮೋರ್ಚಾದಿಂದ ಕೋಟಿ ಸೆಲ್ಫಿ
Team Udayavani, Feb 27, 2023, 7:30 AM IST
ಹೊಸದಿಲ್ಲಿ: 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಈಗಲೇ ಸಿದ್ಧತೆ ಆರಂಭಿಸಿದೆ. ಅದರ ಅಂಗವಾಗಿ ಬಿಜೆಪಿಯ ರಾಷ್ಟ್ರೀಯ ಮಹಿಳಾ ಮೋರ್ಚಾ ಬೃಹತ್ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದೆ.
ಇನ್ನೊಂದು ವರ್ಷದೊಳಗೆ ಕೇಂದ್ರ ಸರಕಾರದ ಯೋಜನೆಗಳ ಲಾಭ ಪಡೆದ ಮಹಿಳೆಯರನ್ನು ಅದು ಸಂಪರ್ಕಿಸಲಿದೆ. ಇಂತಹ 1 ಕೋಟಿ ಫಲಾನುಭವಿಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ.
ಅಷ್ಟೇ ಅಲ್ಲದೆ ಮುಂದಿನ ಮಾರ್ಚ್ ತಿಂಗಳಲ್ಲಿ ಬಿಜೆಪಿಯ ದಿವಂಗತ ನಾಯಕಿ ಸುಷ್ಮಾ ಸ್ವರಾಜ್ ಗೌರವಾರ್ಥ ಸಮಾವೇಶವನ್ನು ಹಮ್ಮಿಕೊಳ್ಳಲಾಗುತ್ತದೆ. ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ತಲಾ 10 ಮಹಿಳೆಯರನ್ನು ಪ್ರತೀ ಜಿಲ್ಲೆಯಿಂದ ಆಯ್ಕೆ ಮಾಡಿ ಸಮಾವೇಶದಲ್ಲಿ ಸಮ್ಮಾನಿಸಲಾಗುತ್ತದೆ ಎಂದು ಮಹಿಳಾ ಮೋರ್ಚಾ ಮುಖ್ಯಸ್ಥೆ ವನಥಿ ಶ್ರೀನಿವಾಸನ್ ಹೇಳಿದ್ದಾರೆ.
ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಯೋಜನೆ ಕೂಡ ಮಹಿಳೆಯರನ್ನು ತಲುಪುವ ಯತ್ನ, ಪ್ರತೀ ಜಿಲ್ಲೆಗೂ ಬಿಜೆಪಿ ಮಹಿಳಾ ಘಟಕದ ಕಾರ್ಯಕರ್ತರು ತೆರಳಿ ಕೇಂದ್ರದ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡುತ್ತಾರೆ. ಅನಂತರ ಯಾರು ಈ ಯೋಜನೆಗಳಿಂದ ಅನುಕೂಲ ಪಡೆದಿದ್ದಾರೋ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಾರೆ. ಈ ಇಡೀ ಪ್ರಕ್ರಿಯೆಯು ನಮೋ ಆ್ಯಪ್ ಮೂಲಕ ನಡೆಯಲಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು