ಒಸ್ಮಾನಿಯಾ ವಿವಿ ಅತಿಕ್ರಮ ಪ್ರವೇಶ ಆರೋಪ; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕೇಸ್
ತೇಜಸ್ವಿ ಸೂರ್ಯ ಅವರು ಮಂಗಳವಾರ ಒಸ್ಮಾನಿಯಾ ಯೂನಿರ್ವಸಿಟಿಗೆ ಭೇಟಿ ನೀಡಿದ್ದರು
Team Udayavani, Nov 26, 2020, 5:55 PM IST
ಹೈದರಾಬಾದ್: ಅನುಮತಿ ಪಡೆಯದೆ ಹೈದರಾಬಾದ್ ನ ಒಸ್ಮಾನಿಯಾ ಯೂನಿರ್ವಸಿಟಿಯೊಳಕ್ಕೆ ಪ್ರವೇಶಿಸಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ, ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಿರುವುದಾಗಿ ವರದಿ ತಿಳಿಸಿದೆ.
ಸಂಸದ ತೇಜಸ್ವಿ ಸೂರ್ಯ ವಿವಿಯೊಳಗೆ ಅತಿಕ್ರಮ ಪ್ರವೇಶ ಮಾಡಿರುವುದಾಗಿ ಒಸ್ಮಾನಿಯಾ ಯೂನಿರ್ವಸಿಟಿಯ ರಿಜಿಸ್ಟ್ರಾರ್ ದೂರು ದಾಖಲಿಸಿರುವುದಾಗಿ ತೆಲಂಗಾಣ ಪೊಲೀಸ್ ವರಿಷ್ಠಾಧಿಕಾರಿ ಮಹೇಂದರ್ ರೆಡ್ಡಿ ಗುರುವಾರ(ನವೆಂಬರ್ 26, 2020) ತಿಳಿಸಿದ್ದಾರೆ.
ಡಿಸೆಂಬರ್ ನಲ್ಲಿ ನಡೆಯಲಿರುವ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್ (ಜಿಎಚ್ ಎಂಸಿ) ಚುನಾವಣೆಯ ಹಿನ್ನೆಲೆಯಲ್ಲಿ ತೇಜಸ್ವಿ ಸೂರ್ಯ ಬಿರುಸಿನ ಪ್ರಚಾರ ಕಾರ್ಯ ಕೈಗೊಂಡಿದ್ದರು. ಚುನಾವಣಾ ಪ್ರಚಾರದ ವೇಳೆ ತೇಜಸ್ವಿ ಸೂರ್ಯ ಹೈದರಾಬಾದ್ ಸಂಸದ, ಎಐಎಂಐಎಂ ಮುಖಂಡ ಅಸಾದುದ್ದೀನ್ ಒವೈಸಿ ಹಾಗೂ ಆಡಳಿತಾರೂಢ ಟಿಆರ್ ಎಸ್ ವಿರುದ್ಧ ವಿವಾದಿತ ಹೇಳಿಕೆ ನೀಡಿರುವುದಾಗಿ ವರದಿ ಹೇಳಿದೆ.
ತೇಜಸ್ವಿ ಸೂರ್ಯ ಅವರು ಮಂಗಳವಾರ ಒಸ್ಮಾನಿಯಾ ಯೂನಿರ್ವಸಿಟಿಗೆ ಭೇಟಿ ನೀಡಿದ್ದರು. ಸೂರ್ಯ ಹಾಗೂ ಬೆಂಬಲಿಗರು ಬ್ಯಾರಿಕೇಡ್ ಅನ್ನು ಕಿತ್ತೆಸೆದು ಬಲವಂತವಾಗಿ ಆವರಣದೊಳಕ್ಕೆ ನುಗ್ಗಿ ಆರ್ಟ್ಸ್ ಕಾಲೇಜಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿರುವುದಾಗಿ ರಿಜಿಸ್ಟ್ರಾರ್ ದೂರಿನಲ್ಲಿ ತಿಳಿಸಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಪ್ರಾಪ್ತೆಯ ಕೈ ಹಿಡಿದು, ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್
ಹಿಂದೂ ದೇವತೆ, ಅಮಿತ್ ಶಾ ಅವಹೇಳನ ಪ್ರಕರಣ; ಹಾಸ್ಯ ನಟ ಮುನಾವರ್ ಬೇಲ್ ಗೆ ನಕಾರ
ಬಹ್ರೇನ್ ಮತ್ತು ಶ್ರೀಲಂಕಾಗೆ ಭಾರತದ ಕೋವಿಶೀಲ್ಡ್ ರವಾನೆ
ರೈತರ ಟ್ರ್ಯಾಕ್ಟರ್ ರಾಲಿ ಹಿಂಸಾಚಾರ: ಗಾಯಗೊಂಡ ಪೊಲೀಸರ ಆರೋಗ್ಯ ವಿಚಾರಿಸಿದ ಶಾ
ಆರೋಗ್ಯ ಕ್ಷೇತ್ರಕ್ಕೆ ಈ ಬಾರಿ ದುಪ್ಪಟ್ಟು ಅನುದಾನ ಸಾಧ್ಯತೆ