ಗೋವಾದಲ್ಲಿ ಏರಿಕೆಯಾಗುತ್ತಿದೆ ಬ್ಲ್ಯಾಕ್ ಫಂಗಸ್ : ಸಾವಿನ ಪ್ರಮಾಣವೂ ಹೆಚ್ಚಳ
Team Udayavani, Jun 14, 2021, 4:12 PM IST
ಪಣಜಿ: ಗೋವಾದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದೆ, ಆದರೆ ಬ್ಲ್ಯಾಕ್ ಫಂಗಸ್ ಸೋಂಕು ಹರಡುತ್ತಿರುವುದು ಮಾತ್ರವಲ್ಲದೆಯೇ ಬ್ಲ್ಯಾಕ್ ಫಂಗಸ್ಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿರುವುದು ಆತಂಕ ತಂದಿದೆ.
ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದಿದ್ದು ಸದ್ಯ 4882 ಸಕ್ರೀಯ ಪ್ರಕರಣಗಳಿವೆ. ಕೋವಿಡ್ ಸೋಂಕಿನಿಂದ ಗುಣಮುಖರಾಗುತ್ತಿರುವ ಪ್ರಮಾಣ ಶೇ 95.19 ರಷ್ಟಿದೆ. ಆದರೆ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಹರಡುತ್ತಿರುವುದು ಆತಂಕ ಉಂಟುಮಾಡಿದೆ. ಆರೋಗ್ಯ ಇಲಾಖೆಯ ಮಾಹಿತಿಯ ಅನುಸಾರ ರಾಜ್ಯದಲ್ಲಿ ಇದುವರೆಗೂ 24 ಜನರಿಗೆ ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದ್ದು, ಈ ಪೈಕಿ 10 ಜನರು ಸಾವನ್ನಪ್ಪಿದ್ದಾರೆ. 11 ಜನ ಸೋಂಕಿತರು ಗೋವಾ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮೂವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಅರುಣ್ ಸಿಂಗ್ ಆಗಮನಕ್ಕೂ ಮೊದಲೇ ಬಿಜೆಪಿಯಲ್ಲಿ ತಾಲೀಮು ಶುರು
ಗೋವಾ ಸರ್ಕಾರವು ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಗೋವಾ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರತ್ಯೇಕ ವಾರ್ಡ ವ್ಯವಸ್ಥೆ ಮಾಡಿದೆ. ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಅಗತ್ಯವಿರುವ ಎಲ್ಲ ಔಷಧೋಪಚಾರಗಳು ಗೋವಾ ವೈದ್ಯಕೀಯ ಆಸ್ಪತ್ರೆಯಲ್ಲಿ ಲಭ್ಯವಿದೆ ಎಂದು ಆಸ್ಪತ್ರೆಯ ಹಿರಿಯ ವೈದ್ಯ ಡಾ. ಬೆತೋಡ್ಕರ್ ರವರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ