ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: 4 ಕಾರ್ಮಿಕರು ಸಾವು, 27 ಮಂದಿಗೆ ಗಾಯ
Team Udayavani, Feb 29, 2020, 7:52 AM IST
ಹರಿಯಾಣ: ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ ನಾಲ್ವರು ಕಾರ್ಮಿಕರು ಸಾವನ್ನಪ್ಪಿ, 27 ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡ ಘಟನೆ ಬಲ್ಲಾಗಢ್ ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಘಟನೆ ಕುರಿತು ಮಾಹಿತಿ ನೀಡಿದ ಪೊಲೀಸರು, ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡಿದೆ. ಸುತ್ತಲೂ ಬೆಂಕಿ ಆವರಿಸಿದ್ದು ರಕ್ಷಣಾ ಕಾರ್ಯಾಚರಣೆಗೆ ತೊಡಕಾಗುತ್ತಿದೆ. ಕಾರ್ಖಾನೆಯೊಳಗೆ ಇನ್ನು ಹಲವರು ಸಿಲುಕಿರುವ ಸಾಧ್ಯತೆ ಎಂದು ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶೂ (ಪಾದರಕ್ಷೆ) ಕಾರ್ಖಾನೆಯಲ್ಲಿ ಈ ಅವಘಡ ನಡೆದಿದ್ದು, ಬೆಂಕಿ ಇತರ ಮೂರು ಕಟ್ಟಡಗಳಿಗೆ ಹಬ್ಬಿದೆ ಎಂದು ತಿಳಿದುಬಂದಿದೆ.
ಬಾಯ್ಲರ್ ಸ್ಪೋಟಗೊಳ್ಳಲು ಕಾರಣವೇನು ಎಂಬುದು ನಿಖರವಾಗಿ ತಿಳಿದಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು, ಸ್ಥಳೀಯ ಅಧಿಕಾರಿಗಳು ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದರು ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ