ಜಮ್ಮು ಕಾಶ್ಮೀರದ ಸಾಂಬಾದಲ್ಲಿ ಗೋ ಕಳ್ಳಸಾಗಣೆ: 14 ಗೋವುಗಳ ರಕ್ಷಣೆ
Team Udayavani, Aug 27, 2018, 4:33 PM IST
ಜಮ್ಮು : ಜಮ್ಮು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿಂದು ಗೋ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಲಾಗಿದ್ದು 14 ಗೋವುಗಳನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯ ತಾಪ್ಯಾಲ್ ಪ್ರದೇಶದಲ್ಲಿಂದು ವೇಗವಾಗಿ ಧಾವಿಸಿಬರುತ್ತಿದ್ದ ಟ್ರಕ್ಕನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಅದು ನಿಲ್ಲದೆ ಪರಾರಿಯಾಗಲು ಯತ್ನಿಸಿತು. ಟ್ರಕ್ ಒಳಗೆ ದನಗಳು ಇರುವುದು ಪತ್ತೆಯಾಯಿತು.
ಪೊಲೀಸರು ತಮ್ಮನ್ನು ಬೆನ್ನಟ್ಟುವುದನ್ನು ಕಂಡ ಟ್ರಕ್ ಚಾಲಕ, ಜತ್ವಾಲ್ ಪ್ರದೇವದಲ್ಲಿ ಒಂದೆಡೆ ಟ್ರಕ್ ನಿಲ್ಲಿಸಿ ಪರಾರಿಯಾದ.
ಟ್ರಕ್ಕಿನಲ್ಲಿದ್ದ 14 ದನಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಇವುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಒಯ್ಯಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಗಗ್ವಾಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಕೇಸು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್