ಅಸ್ಸಾಂನಲ್ಲಿ ಕಮಲಕ್ಕೆ ಆಘಾತ…BJP ಜತೆ ಮೈತ್ರಿ ಮುರಿದುಕೊಂಡ BPF


Team Udayavani, Feb 27, 2021, 10:45 PM IST

BPF

ಅಸ್ಸಾಂ : ವಿಧಾನ ಸಭೆ ಚುನಾವಣೆ ಎದುರಿಸಲು ಸಿದ್ಧವಾಗುತ್ತಿರುವ ಆಡಳಿತಾರೂಢ ಬಿಜೆಪಿಗೆ ದೊಡ್ಡ ಆಘಾತ ಎದುರಾಗಿದೆ. ಮಿತ್ರಪಕ್ಷ ಬೊಡೊಲ್ಯಾಂಡ್ ಪೀಪಲ್ಸ್ ಫ್ರಂಟ್ (BPF) ಬಿಜೆಪಿ ಸಖ್ಯ ತೊರೆದು ಕಾಂಗ್ರೆಸ್ ಜತೆ ಸೇರಿ ಚುನಾವಣಾ ಪೂರ್ವ ಮೈತ್ರಿಗೆ ಮುಂದಾಗಿದೆ.

ಇಂದು (ಫೆ.27) ಬಿಪಿಎಫ್ ಅಧ್ಯಕ್ಷ ಹಂಗ್ರಾಮ್ ಮೊಹಿಲರಿ ಟ್ವೀಟರ್ ನಲ್ಲಿ ಮೈತ್ರಿಯಿಂದ ಹೊರ ಬರುವ ನಿರ್ಧಾರ ಪ್ರಕಟಿಸಿದ್ದಾರೆ. ರಾಜ್ಯದಲ್ಲಿ ಶಾಂತಿ, ಒಕ್ಕಟ್ಟು ಹಾಗೂ ಅಭಿವೃದ್ಧಿಯ ನಿಟ್ಟಿನಲ್ಲಿ ಬಿಪಿಎಫ್, ಮಹಾಜತ್ (ಕಾಂಗ್ರೆಸ್ ಮೈತ್ರಿಕೂಟ) ಜತೆ ಕೈ ಜೋಡಿಸುತ್ತಿದೆ ಎಂದು ಹೇಳಿರುವ ಅವರು, ನಾವು ಇಂದಿನಿಂದ(ಫೆ.27) ಬಿಜೆಪಿ ಜತೆಗಿನ ಮೈತ್ರಿ ಮುರಿದುಕೊಂಡಿದ್ದೇವೆ ಎಂದಿದ್ದಾರೆ.

ಕಳೆದ ಬಾರಿ ಚುನಾವಣೆಯಲ್ಲಿ 15 ವರ್ಷಗಳ ಕಾಂಗ್ರೆಸ್ ಆಡಳಿತ ಕೊನೆಗಾಣಿಸಿ, ಅಸ್ಸಾಂ ಗಣ ಪರಿಷದ್ , ಹಾಗೂ ಬೊಡೊಲ್ಯಾಂಡ್ ಪೀಪಲ್ಸ್ ಫ್ರಂಟ್ ಜತೆ ಮೈತ್ರಿ ಮಾಡಿಕೊಂಡ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. 126 ವಿಧಾನ ಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 86, ಎಜಿಪಿ 14 ಹಾಗೂ ಬಿಪಿಎಫ್12 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದವು.

ಇದನ್ನೂ ಓದಿ:ರಾಮ ಮಂದಿರ ದೇಣಿಗೆ ಅಭಿಯಾನ ಸಂಪನ್ನ…ಇದುವರೆಗೆ ಸಂಗ್ರಹಗೊಂಡಿದ್ದು ಎಷ್ಟು ಕೋಟಿ ?

ಮೈತ್ರಿಯಿಂದ ಹೊರ ಬರಲು ಅಸಲಿ ಕಾರಣ ?

ಕಳೆದ ವರ್ಷ ‘ಬೋಡೋಲ್ಯಾಂಡ್ ಟೆರಿಟೋರಿಯಲ್ ಕೌನ್ಸಿಲ್’ ನಲ್ಲಿ ಅಧಿಕಾರದ ಗದ್ದುಗೆ ಏರಲು ಬಯಸಿದ್ದ ಬಿಜೆಪಿ, ಮಿತ್ರ ಪಕ್ಷ ಬಿಪಿಎಫ್ ಪಕ್ಕಕ್ಕೆ ಸರಿಸಿ ‘ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್’ (ಯುಪಿಪಿಎಲ್) ಜತೆ ಹೊಂದಾಣಿಕೆ ಮಾಡಿಕೊಂಡಿತ್ತು. ಇದು ಬಿಪಿಎಫ್ ಮುನಿಸಿಗೆ ಕಾರಣವಾಯಿತು. ಅದನ್ನು ಇದೀಗ ಹೊರಹಾಕಿರುವ ಬಿಪಿಎಫ್ ಕಮಲದ ತೆಕ್ಕೆಯಿಂದ ಹೊರ ಬಂದಿದೆ.

ಚುನಾವಣೆ ಯಾವಾಗ ?

ಶುಕ್ರವಾರ (26) ಚುನಾವಣಾ ಆಯೋಗ ದೇಶದ 5 ರಾಜ್ಯಗಳ ವಿಧಾನ ಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಮಾಡಿದೆ. ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್‌ 27 ರಂದು ಮೊದಲ ಹಂತ, ಏಪ್ರಿಲ್ 1ರಂದು ಎರಡನೇ ಹಂತ ಹಾಗೂ ಏಪ್ರಿಲ್ 6ರಂದು ಮೂರನೇ ಹಂತದ ಚುನಾವಣೆ ನಡೆಯಲಿರುವುದಾಗಿ ಆಯೋಗ ತಿಳಿಸಿದೆ. ಮೇ 2ರಂದು ಫಲಿತಾಂಶ ಹೊರಬೀಳಲಿದೆ. 126 ಸೀಟುಗಳಿಗೆ ಚುನಾವಣೆ ನಡೆಯಲಿದ್ದು, ಪರಿಶಿಷ್ಟ ಜಾತಿಗೆ ಎಂಟು ಹಾಗೂ ಪರಿಶಿಷ್ಟ ಪಂಗಡಕ್ಕೆ 16 ಸೀಟುಗಳನ್ನು ಮೀಸಲಿರಿಸಲಾಗಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.