ಪಾಕ್ ಗುಂಡಿನ ದಾಳಿಗೆ ಬಿಎಸ್ಎಫ್ ಯೋಧ ಹುತಾತ್ಮ
Team Udayavani, Sep 15, 2017, 8:54 AM IST
ಶ್ರೀನಗರ: ಪಾಕ್ ಪಡೆಗಳು ಶುಕ್ರವಾರ ಬೆಳಗ್ಗೆ ಕದನ ವಿರಾಮ ಉಲ್ಲಂಘನೆ ಮಾಡಿ ಅರ್ನಿಯಾ ಅಂತರಾಷ್ಟ್ರೀಯ ಗಡಿ ರೇಖೆಯ ಆರ್ಎಸ್ ಪುರಾ ಸೆಕ್ಟರ್ನಲ್ಲಿ ನಡೆಸಿದ ಗುಂಡಿನ ದಾಳಿಯಲ್ಲಿ ಬಿಎಸ್ಎಫ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಓರ್ವ ನಾಗರಿಕ ಗಂಭೀರವಾಗಿ ಗಾಯಗೊಂಡಿದ್ದಾನೆ . ಇದು ಪಾಕ್ ಕಳೆದ 5 ದಿನಗಳಲ್ಲಿ ನಡೆಸಿದ 6 ನೇ ಕದನ ವಿರಾಮ ಉಲ್ಲಂಘನೆಯಾಗಿದೆ.
ಹುತಾತ್ಮರಾದ ಯೋಧ ಬಿಜೇಂದ್ರ ಬಹದೂರ್ ಎಂದು ತಿಳಿದು ಬಂದಿದೆ. ಪಾಕ್ ದಾಳಿಗೆ ತಕ್ಕ ಪ್ರತ್ಯುತ್ತರವನ್ನು ಬಿಎಸ್ಎಫ್ ನೀಡಿದ್ದು ಗುಂಡಿನ ಚಕಮಕಿ ಮುಂದುವರೆದಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ದಾಳಿಯ ಬಳಿಕ ಅರ್ನಿಯಾ ಪ್ರದೇಶದಲ್ಲಿ ನಾಗರಿಕರು ತೀವ್ರ ಭಯ ಭೀತರಾಗಿದ್ದಾರೆ.
ಹೆಚ್ಚುವರಿ ಪಡೆಗಳು ಮತ್ತು ಶಸ್ತ್ರಾಸ್ತ್ರಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದ್ದು, ಯಾವುದೇ ದಾಳಿ ಗೆ ಪ್ರತ್ಯುತ್ತರ ನೀಡಲು ಸೇನೆ ಸಿದ್ದವಾಗಿದೆ ಎಂದು ನಾಗರಿಕರಿಗೆ ಸುರಕ್ಷತೆಯ ಭರವಸೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!