
3 ಪಾಕಿಸ್ತಾನಿ ಸ್ಮಗ್ಲರ್‌ಗಳನ್ನು ಕೊಂದು 180 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ BSF
Team Udayavani, Feb 6, 2022, 9:39 AM IST

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್ ನ ಅಂತಾರಾಷ್ಟ್ರೀಯ ಗಡಿಯಲ್ಲಿ ಡ್ರಗ್ಸ್ ಕಳ್ಳಸಾಗಣೆಗೆ ಯತ್ನಿಸಿದ ಮೂವರು ಪಾಕಿಸ್ತಾನಿ ಸ್ಮಗ್ಲರ್ ಗಳನ್ನು ಗಡಿ ಭದ್ರತಾ ಪಡೆ ಸಿಬ್ಬಂದಿ ಭಾನುವಾರ ಗುಂಡಿಕ್ಕಿ ಕೊಂದಿದ್ದಾರೆ.
ಇವರಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 180 ಕೋಟಿ ರೂ. ಬೆಲೆಬಾಳುವ 36 ಹೆರಾಯಿನ್ ಪ್ಯಾಕೆಟ್ ವಶಪಡಿಸಿಕೊಳ್ಳಲಾಗಿದೆ.
“ಫೆ.6 ರ ಮುಂಜಾನೆ ಬಿಎಸ್ಎಫ್ ಜಮ್ಮುವಿನ ಅಲರ್ಟ್ ಪಡೆಗಳು ಸಾಂಬಾ ಅಂತಾರಾಷ್ಟ್ರೀಯ ಗಡಿಯ ಮೂಲಕ ಮಾದಕವಸ್ತುಗಳನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದ 3 ಪಾಕ್ ಕಳ್ಳಸಾಗಣೆದಾರರನ್ನು ಹತ್ಯೆ ಮಾಡಿವೆ. 36 ಪ್ಯಾಕೆಟ್ (ಅಂದಾಜು 36 ಕೆಜಿ) ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ” ಎಂದು ಬಿಎಸ್ಎಫ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದರು.
ಇದನ್ನೂ ಓದಿ:ಅಮೆರಿಕದ ಮ್ಯಾನ್ ಹಟನ್ ನಲ್ಲಿ ಮಹಾತ್ಮಾ ಗಾಂಧಿಯವರ 8 ಅಡಿ ಎತ್ತರ ಪ್ರತಿಮೆ ಧ್ವಂಸ!
ಜನವರಿ 28 ರಂದು, ಪಂಜಾಬ್ ನ ಗುರುದಾಸ್‌ಪುರ ಜಿಲ್ಲೆಯ ಭಾರತ-ಪಾಕ್ ಗಡಿಯಲ್ಲಿ ಪಾಕಿಸ್ತಾನಿ ಸ್ಮಗ್ಲರ್ ಗಳೊಂದಿಗೆ ಬಿಎಸ್‌ಎಫ್ ಅಲ್ಪಾವಧಿಯ ಗುಂಡಿನ ಚಕಮಕಿಯಲ್ಲಿ ತೊಡಗಿತ್ತು. ಅವರಿಂದ 47 ಕೆಜಿ ಹೆರಾಯಿನ್, ಎರಡು ಪಿಸ್ತೂಲ್ ಮತ್ತು ಕೆಲವು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ಓರ್ವ ಬಿಎಸ್‌ಎಫ್ ಯೋಧ ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
