ಎಸ್‌ಪಿ ಜತೆಗೆ ಮೈತ್ರಿ ಮುರಿದ ಮಾಯಾವತಿ

Team Udayavani, Jun 25, 2019, 5:00 AM IST

ಲಕ್ನೋ: ಮುಂದೆ ಬರುವ ಎಲ್ಲ ಚುನಾವಣೆಗಳಲ್ಲೂ ಬಿಎಸ್‌ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಹುಜನ ಸಮಾಜ ಪಕ್ಷದ ಅಧಿನಾಯಕಿ ಮಾಯಾವತಿ ಸೋಮವಾರ ಘೋಷಿಸಿದ್ದಾರೆ. ಈ ಮೂಲಕ ಲೋಕಸಭೆ ಚುನಾವಣೆಗೆ ಮುನ್ನ ಸಮಾಜವಾದಿ ಪಕ್ಷದ ಜತೆಗೆ ಮಾಡಿಕೊಂಡಿದ್ದ ಮೈತ್ರಿಯನ್ನು ಮುರಿದುಕೊಂಡಿರುವುದಾಗಿ ಅಧಿಕೃತ ಘೋಷಣೆ ಮಾಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸಾಧನೆ ಕುರಿತು ಕಾರ್ಯಕರ್ತರೊಂದಿಗೆ ಭಾನುವಾರವಷ್ಟೇ ಮಾಯಾ ಸಭೆ ನಡೆಸಿ ಚರ್ಚಿಸಿದ್ದರು. ಇದರ ಬೆನ್ನಲ್ಲೇ ಸೋಮವಾರ ಮಾತನಾಡಿದ ಅವರು, ‘ಹಿಂದಿನ ಎಲ್ಲ ಕಹಿ ಘಟನೆಗಳನ್ನು ಮರೆತು ದೇಶದ ಹಿತಾಸಕ್ತಿಯಿಂದ ನಾವು ಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು, ಘಟಬಂಧನದ ಧರ್ಮವನ್ನು ಪಾಲಿಸಿದೆವು. ಆದರೆ, ಚುನಾವಣೆ ಫ‌ಲಿತಾಂಶದ ಬಳಿಕ ಎಸ್‌ಪಿ ನಾಯಕರ ವರ್ತನೆಯು ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿತು. ಭವಿಷ್ಯದಲ್ಲಿ ಬಿಜೆಪಿಯನ್ನು ನಾವು ಸೋಲಿಸಲು ಸಾಧ್ಯವೇ ಎಂಬ ಪ್ರಶ್ನೆಯೂ ಮೂಡಿತು. ಆದರೆ, ಅದು ಸಾಧ್ಯವಿಲ್ಲ ಎಂಬುದು ಅರಿವಾಯಿತು. ಹೀಗಾಗಿ, ಪಕ್ಷದ ಹಿತಾಸಕ್ತಿಯ ದೃಷ್ಟಿಯಿಂದ ಮುಂಬರುವ ಎಲ್ಲ ಸಣ್ಣ ಹಾಗೂ ದೊಡ್ಡ ಚುನಾವಣೆಗಳನ್ನು ನಾವು ಏಕಾಂಗಿಯಾಗಿ ಎದುರಿಸುತ್ತೇವೆ’ ಎಂದು ಹೇಳಿದ್ದಾರೆ. ಬಿಜೆಪಿ ಜೊತೆ ಕೈಜೋಡಿಸಿದ ಸಮಾಜವಾದಿ ಪಕ್ಷ ನನ್ನನ್ನು ತಾಜ್‌ ಕಾರಿಡಾರ್‌ ಕೇಸ್‌ನಲ್ಲಿ ಸಿಲುಕಿಸಿದರು. ಯಾದವೇತರ ಸಮಾಜದ ವಿರುದ್ಧ ಎಸ್‌ಪಿ ಕೆಲಸ ಮಾಡುತ್ತಿದ ಎಂದೂ ಆರೋಪಿಸಿದ್ದಾರೆ.

ಹೋರಾಟ ದುರ್ಬಲಗೊಳಿಸಿದ ಮಾಯಾ: ಮಾಯಾವತಿ ಮೈತ್ರಿ ಮುರಿಯುವ ಘೋಷಣೆ ಮಾಡಿದ ಬೆನ್ನಲ್ಲೇ ಟ್ವಿಟರ್‌ನಲ್ಲಿ ತಮ್ಮ ಅಸಮಾಧಾನ ಹೊರಹಾಕಿರುವ ಎಸ್‌ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಮಾಶಂಕರ್‌ ವಿದ್ಯಾರ್ಥಿ, ‘ದಲಿತರು ಈಗ ಎಸ್‌ಪಿಯತ್ತ ಮುಖಮಾಡಿರುವ ಕಾರಣ, ಹತಾಶೆಯಿಂದ ಮಾಯಾ ಈ ರೀತಿಯ ಮಾತುಗಳನ್ನಾಡಿದ್ದಾರೆ. ಮೈತ್ರಿ ಮುರಿದುಕೊಳ್ಳುವ ಮೂಲಕ ಅವರು ಸಾಮಾಜಿಕ ನ್ಯಾಯದ ಹೋರಾಟವನ್ನು ದುರ್ಬಲಗೊಳಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ