2020-21ನೇ ಸಾಲಿನ ಬಜೆಟ್ ಸಿದ್ಧತಾ ಸಭೆ 14ರಿಂದ ಶುರು
Team Udayavani, Oct 7, 2019, 5:33 AM IST
ಹೊಸದಿಲ್ಲಿ: ಮುಂದಿನ ವಿತ್ತೀಯ ವರ್ಷಕ್ಕಾಗಿನ ಮುಂಗಡ ಪತ್ರ ಸಿದ್ಧತೆ ನಡೆಸಲು ಕೇಂದ್ರ ಹಣಕಾಸು ಸಚಿವಾಲಯ ಅ. 21ರಿಂದ ಸಿದ್ಧತಾ ಸಭೆಗಳನ್ನು ಶುರು ಮಾಡಲಿದೆ. ಆರ್ಥಿಕ ಕ್ಷೇತ್ರದ ಹಲವು ವಿಭಾಗಗಳಿಗೆ ಸಂಬಂಧಿಸಿ ಹಿನ್ನಡೆಯ ಹಿನ್ನೆಲೆಯಲ್ಲಿ ಕಡಿಮೆ ಪ್ರಮಾಣದಲ್ಲಿ ಆದಾಯ ಸಂಗ್ರಹಣೆಯ ಬಗ್ಗೆ ಕೂಡ ಸಭೆಯ ವಿವಿಧ ಹಂತಗಳಲ್ಲಿ ಪ್ರಸ್ತಾಪವಾಗುವ ಸಾಧ್ಯತೆ ಇದೆ.
ಹೀಗಾಗಿ, ಎಲ್ಲ ಸಲಹೆಗಳೂ ಕೂಡ ಕೇಂದ್ರ ಬಜೆಟ್ ಮಾಹಿತಿ ವ್ಯವಸ್ಥೆಯಲ್ಲಿ ಸೇರಿಸಬೇಕು ಎಂದು ಆರ್ಥಿಕ ವ್ಯವಹಾರಗಳ ವಿಭಾಗ ಸೂಚನೆ ನೀಡಿದೆ.
2020-21ನೇ ಸಾಲಿಗಾಗಿ ಇರುವ ಬಜೆಟ್ಗೆ ಸಂಬಂಧಿಸಿದ ಪೂರ್ವಭಾವಿ ಅಂದಾಜು ವಿವರಗಳನ್ನು ವೆಚ್ಚಕ್ಕೆ ಸಂಬಂಧಿಸಿದ ಕಾರ್ಯದರ್ಶಿ ಇತರ ವಿಭಾಗಗಳ ಕಾರ್ಯದರ್ಶಿಗಳ ಜತೆಗೆ ಸಮಾಲೋಚನೆ ನಡೆಸಿ ಪೂರ್ಣಗೊಳಿಸುತ್ತಾರೆ. ಈ ಸಭೆ ಮುಂದಿನ ತಿಂಗಳ ಮೊದಲ ವಾರದವರೆಗೆ ನಡೆಯುತ್ತದೆ. ಪ್ರಧಾನಿ ಮೋದಿ ನೇತೃತ್ವದ ಸರಕಾರದ 2ನೇ ಬಜೆಟ್ 2020ರ ಫೆಬ್ರವರಿಯಲ್ಲಿ ಮಂಡಿಸಲಾಗುತ್ತದೆ. 2017ರಿಂದ ಫೆ.1ರಂದು ಬಜೆಟ್ ಮಂಡಿಸುವ ಹೊಸ ವ್ಯವಸ್ಥೆಗೆ ಮೋದಿ ಸರಕಾರ ಶ್ರೀಕಾರ ಹಾಕಿತ್ತು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಅದು ಎರಡನೇ ಬಜೆಟ್ ಆಗಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ