ಬುಲ್ಲಿ ಬಾಯ್ ಆ್ಯಪ್ ಪ್ರಕರಣ:ಮುಂಬೈ ಪೊಲೀಸರಿಂದ ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿ ಬಂಧನ
Team Udayavani, Jan 4, 2022, 10:05 AM IST
ನವದೆಹಲಿ: ಮುಸ್ಲಿಂ ಸಮುದಾಯದ ಸಾವಿರಾರು ಮಹಿಳೆಯರ ಫೋಟೋಗಳನ್ನು ಆನ್ ಲೈನ್ನಲ್ಲಿ ಮಾರಾಟ ಮಾಡಿದ “ಬುಲ್ಲಿ ಭಾಯ್’ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 21 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಿಂದ ಬಂಧಿತನಾಗಿರುವ ಶಂಕಿತನ ವಯಸ್ಸನ್ನು ಹೊರತುಪಡಿಸಿ ಮುಂಬೈ ಪೊಲೀಸರು ಇನ್ನೂ ಗುರುತನ್ನು ಬಹಿರಂಗಪಡಿಸಿಲ್ಲ. ಪೊಲೀಸರು ಅಪರಿಚಿತ ಅಪರಾಧಿಗಳ ವಿರುದ್ಧ ಐಪಿಸಿ ಮತ್ತು ಐಟಿ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮುಸ್ಲಿಂ ಸಮುದಾಯದ ಸಾವಿರಾರು ಮಹಿಳೆಯರ ಫೋಟೋಗಳನ್ನು ಆನ್ ಲೈನ್ನಲ್ಲಿ ಮಾರಾಟ ಮಾಡಿದ “ಬುಲ್ಲಿ ಭಾಯ್’ ಎಂಬ ಆ್ಯಪ್ ಅನ್ನು ಬ್ಲಾಕ್ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಭಾನುವಾರ ತಿಳಿಸಿದ್ದರು.
ಇದನ್ನೂ ಓದಿ:ಮಗಳ ಮದುವೆ ಸಂದರ್ಭ ಇಬ್ಬರು ಬಡ ಹೆಣ್ಣುಮಕ್ಕಳಿಗೆ ವಿವಾಹ ನೆರವೇರಿಸಿದ ಅಬ್ಬಚ್ಚ !
ಮುಂಬೈ ಪೊಲೀಸರು ಗಿಟ್ಹಬ್ ಪ್ಲಾಟ್ಫಾರ್ಮ್ ಹೋಸ್ಟ್ ಮಾಡಿದ ‘ಬುಲ್ಲಿ ಬಾಯಿ’ ಅಪ್ಲಿಕೇಶನ್ನಲ್ಲಿ ಮಹಿಳೆಯರ ಫೋಟೋಗಳನ್ನು ಹರಾಜಿಗೆ ಅಪ್ ಲೋಡ್ ಮಾಡಲಾಗಿದೆ ಎಂಬ ದೂರಿನ ಆಧಾರದ ಮೇಲೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಥಮ ಮಾಹಿತಿ ವರದಿಯನ್ನು (ಎಫ್ಐಆರ್) ದಾಖಲಿಸಿದ್ದರು.
ಗಿಟ್ಹಬ್ ಎಂಬ ಆನ್ಲೈನ್ ವೇದಿಕೆ ಹೆಣ್ಣುಮಕ್ಕಳ ಫೋಟೋಗಳನ್ನು ಹರಾಜು ಹಾಕಿ, ಮಾರಾಟ ನಡೆಯುತ್ತಿತ್ತು. ಈ ಹಿಂದೆಯೂ ಗಿಟ್ ಹಬ್ ವೇದಿಕೆಯು “ಸಲ್ಲಿ ಡೀಲ್ಸ್’ ಎಂಬ ಆ್ಯಪ್ ಮೂಲಕ ಮುಸ್ಲಿಂ ಮಹಿಳೆಯರ ಫೋಟೋಗಳನ್ನು ಅಪ್ ಲೋಡ್ ಮಾಡಿ, ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಸಾರ್ವಜನಿಕರನ್ನು ಆಹ್ವಾನಿಸುತ್ತಿತ್ತು. ಮಹಿಳೆಯರ ಸಾಮಾಜಿಕ ಜಾಲತಾಣಗಳ ಖಾತೆಯಿಂದ ಫೋಟೋಗಳನ್ನು ತೆಗೆದುಕೊಂಡು ಈ ಕೃತ್ಯ ಎಸಗಲಾಗುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!