ಆಗ್ರಾ -ಲಕ್ನೋ ಹೆದ್ದಾರಿಯಲ್ಲಿ ಭೀಕರ ಅಪಘಾತ : 7 ಬಲಿ
ಘಟನೆಯಲ್ಲಿ 34 ಪ್ರಯಾಣಿಕರಿಗೆ ಗಾಯ ; ಹಲವರ ಸ್ಥಿತಿ ಗಂಭೀರ
Team Udayavani, Apr 21, 2019, 8:52 AM IST
ಲಕ್ನೋ: ಉತ್ತರಪ್ರದೇಶದ ಮಾಯಿನ್ ಪುರಿ ಎಂಬಲ್ಲಿ ಆಗ್ರಾ – ಲಕ್ನೋ ಎಕ್ಸ್ ಪ್ರಸ್ ಹೆದ್ದಾರಿಯಲ್ಲಿ ಆದಿತ್ಯವಾರ ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಇಲ್ಲಿನ ಕರ್ಹಾಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಹೆದ್ದಾರಿಯಲ್ಲಿ ದೆಹಲಿಯಿಂದ ಬನಾರಸ್ ಗೆ ಸಾಗುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಎದುರು ಸಾಗುತ್ತಿದ್ದ ಟ್ರಕ್ಕಿಗೆ ಅಪ್ಪಳಿಸಿದ ಪರಿಣಾಮ ಬಸ್ಸಿನಲ್ಲಿದ್ದ ಏಳು ಜನ ಸಾವಿಗೀಡಾಗಿದ್ದಾರೆ ಮತ್ತು 34 ಪ್ರಯಾಣಿಕರು ಗಾಯಗೊಂಡಿದ್ದಾರೆ.
ವೇಗವಾಗಿ ಸಾಗುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ಕಳೆದುಕೊಂಡು ಟ್ರಕ್ಕಿಗೆ ಅಪ್ಪಳಿಸಿದ ಕಾರಣ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ಸಿನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಮತ್ತು ಮೃತದೇಹಗಳನ್ನು ಹೊರತೆಗೆಯಲು ಹರಸಾಹಸಪಡಬೇಕಾಯಿತು.
ಗಾಯಾಳುಗಳಲ್ಲಿ ಹಲವರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್