ಉತ್ತರಾಖಂಡ : ಕಂದಕಕ್ಕೆ ಉರುಳಿದ ಮದುವೆ ದಿಬ್ಬಣದ ಬಸ್, 25 ಮಂದಿ ಸಾವು, ಹಲವರಿಗೆ ಗಾಯ!
Team Udayavani, Oct 5, 2022, 7:46 AM IST
ಡೆಹ್ರಾಡೂನ್ : ಮದುವೆ ದಿಬ್ಬಣದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಸುಮಾರು 25 ಮಂದಿ ಪ್ರಯಾಣಿಕರು ಸಾವನ್ನಪ್ಪಿ ಹಲವರು ಗಂಭೀರ ಗಾಯಗೊಂಡ ಘಟನೆ ಉತ್ತರಾಖಂಡ್ನ ಪೌರಿ ಗಡ್ವಾಲ್ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ಬಸ್ಸಿನಲ್ಲಿ ಸುಮಾರು ನಲ್ವತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದಾರೆಂದು ಹೇಳಲಾಗಿದೆ, ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಎಸ್ಡಿಆರ್ಎಫ್ ಧಾವಿಸಿ ರಾತ್ರೋರಾತ್ರಿ 21 ಜನರನ್ನು ರಕ್ಷಿಸಿದ್ದಾರೆ, ಅಲ್ಲದೆ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ ಎಂದು ರಾಜ್ಯ ಪೊಲೀಸ್ ಮುಖ್ಯಸ್ಥ ಅಶೋಕ್ ಕುಮಾರ್ ತಿಳಿಸಿದ್ದಾರೆ.
ಮದುವೆ ಸಮಾರಂಭ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಪೌರಿ ಗಡ್ವಾಲ್ ತಲುಪುತಿದ್ದಂತೆ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ಸು ಸುಮಾರು 500 ಮೀಟರ್ ಆಳದ ಉರುಳಿ ಬಿದ್ದು ಅವಘಡ ಸಂಭವಿಸಿದೆ.
ದುರಂತದಲ್ಲಿ ಸಾವಿಗೀಡಾದವರಿಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
पौड़ी गढ़वाल में धुमाकोट रिखणीखाल बस हादसे में उत्तराखंड पुलिस और एसडीआरएफ ने स्थानीय लोगों के साथ मिलकर 21 लोगों को बचाया। @ANI pic.twitter.com/wgrf4HNkee
— Ashok Kumar IPS (@AshokKumar_IPS) October 5, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್