ಉದ್ದಿಮೆಗಳಿಂದ ಬಂಡವಾಳ ಹಿಂದೆಗೆತಕ್ಕೆ ಸಂಪುಟ ಒಪ್ಪಿಗೆ
Team Udayavani, Oct 5, 2019, 4:14 AM IST
ಹೊಸದಿಲ್ಲಿ: ಕೆಲವು ಉದ್ದಿಮೆಗಳಿಂದ ಬಂಡವಾಳ ಹಿಂಪಡೆವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಸಭೆ ಅನುಮೋದನೆ ನೀಡಿದೆ. ಗುರುವಾರ ನಡೆದಿದ್ದ ಸಭೆಯ ಬಗ್ಗೆ ಶುಕ್ರವಾರ ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.
ವಿತ್ತ ಸಚಿವಾಲಯದ ವ್ಯಾಪ್ತಿಯಲ್ಲಿ ಬರುವ ಬಂಡವಾಳ ಮತ್ತು ಸಾರ್ವಜನಿಕ ಸ್ವತ್ತು ನಿರ್ವಹಣಾ ವಿಭಾಗ (ಡಿಐಪಿಎಎಂ)ದ ಮೂಲಕ ಈ ಪ್ರಕ್ರಿಯೆ ಕೈಗೆತ್ತಿಕೊಳ್ಳಲಾಗುತ್ತದೆ.
ನೀತಿ ಆಯೋಗ ಮತ್ತು ಡಿಐಪಿಎಎಂ ಯಾವ ಉದ್ದಿಮೆಗಳಿಂದ ಬಂಡವಾಳ ಹಿಂಪಡೆಯಬಹುದು ಎಂಬ ಬಗ್ಗೆ ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳ ಲಿವೆ. ಕೆಲ ದಿನಗಳ ಹಿಂದಷ್ಟೇ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ನಲ್ಲಿರುವ ಶೇ.53.29, ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿರುವ ಶೇ.63.75, ಕಾಂಕರ್ (Concor)ನಲ್ಲಿರುವ ಶೇ.30, ನೀಪ್ಕೋದಲ್ಲಿರುವ ಶೇ.75ರಷ್ಟು ಸರಕಾರದ ಪಾಲು 4-5 ತಿಂಗಳಲ್ಲಿ ಈ ಪ್ರಕ್ರಿಯೆ ನಡೆಯಲಿದೆ ಎಂದು ಆ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು