ಬೆಳ್ಳಂಬೆಳಗ್ಗೆ ಭೀಕರ ಅಪಘಾತ : ಮೂವರು ಮಹಿಳೆಯರು ಸೇರಿ ಏಳು ಮಂದಿ ಸ್ಥಳದಲ್ಲೇ ಸಾವು
Team Udayavani, May 7, 2022, 4:22 PM IST
ಉತ್ತರ ಪ್ರದೇಶ : ಜಿಲ್ಲೆಯ ನೌಜಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಯಮುನಾ ಎಕ್ಸ್ಪ್ರೆಸ್ವೇ 68 ರಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಮಹಿಳೆಯರು ಸೇರಿ ಒಟ್ಟು ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.
ಮೃತರೆಲ್ಲರೂ ಒಂದೇ ಕುಟುಂಬದವರಾಗಿದ್ದು ವಿವಾಹ ಸಮಾರಂಭಕ್ಕೆ ತೆರಳಿ ದೆಹಲಿಯಿಂದ ಆಗ್ರಾಕ್ಕೆ ವಾಪಸು ಬರುತ್ತಿದ್ದ ವೇಳೆ ಶನಿವಾರ ಮುಂಜಾನೆ 5 ಗಂಟೆಯ ಸುಮಾರಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಅವಘಡ ಸಂಭವಿಸಿದೆ.
ಸುದ್ದಿ ತಿಳಿದಾಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಮಥುರಾ ಜಿಲ್ಲಾಸ್ಪತ್ರೆಗೆ ರವಾನಿಸಿದರು. ಕಾರು ದೆಹಲಿಯಿಂದ ಆಗ್ರಾಕ್ಕೆ ಹೋಗುತ್ತಿತ್ತು. ಈ ವೇಳೆ ಅಪರಿಚಿತ ವಾಹನವೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಮಹಿಳೆಯರು, ಮೂವರು ಪುರುಷರು ಹಾಗೂ ಮಗುವೊಂದು ಸೇರಿ ಎಲ್ಲರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತರನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ ಎಂದು ಎಸ್ಪಿ ದೇಹತ್ ಶ್ರೀಶ್ ಚಂದ್ ತಿಳಿಸಿದ್ದಾರೆ.
ಸಂತಾಪ :
ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ : ಎಸ್ಐಗೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಬೆದರಿಕೆ
उत्तर प्रदेश के मथुरा में हुई सड़क दुर्घटना हृदयविदारक है। इस हादसे में जिन्होंने अपने प्रियजनों को खो दिया है, उनके प्रति मेरी गहरी संवेदनाएं। इसके साथ ही घायलों के शीघ्र स्वस्थ होने की कामना करता हूं: PM @narendramodi
— PMO India (@PMOIndia) May 7, 2022
मथुरा में यमुना एक्सप्रेस-वे पर सड़क दुर्घटना में हुई लोगों की मृत्यु अत्यंत दुःखद है।
अधिकारियों को राहत व बचाव कार्य तेजी से संचालित करने तथा घायलों के उपचार हेतु निर्देश दिए गए हैं।
प्रभु श्री राम दिवंगत आत्माओं को शांति तथा घायलों को शीघ्र स्वास्थ्य लाभ प्रदान करें।
— Yogi Adityanath (@myogiadityanath) May 7, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ