ಟ್ರಕ್ – ಕಾರು ನಡುವೆ ಭೀಕರ ಅಪಘಾತ; ಐವರ ದುರ್ಮರಣ
Team Udayavani, Jan 1, 2023, 2:15 PM IST
ಜೈಪುರ: ಕಾರು ಹಾಗೂ ಟ್ರಕ್ ನಡುವಿನ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಹನುಮಾನ್ಗಢ ಜಿಲ್ಲೆಯ ಬಿಸರಸರ ಗ್ರಾಮದ ಬಳಿ ಶನಿವಾರ ರಾತ್ರಿ (ಡಿ.31 ರಂದು) ನಡೆದಿದೆ.
ರಾಜು ಮೇಘವಾಲ್, ನರೇಶ್ ಕುಮಾರ್, ದನರಾಮ್, ಬಬ್ಲು ಮತ್ತು ಮುರಳಿ ಶರ್ಮಾ ಮೃತರು.
ಇಟ್ಟಿಗೆಗಳನ್ನು ತುಂಬಿಸಿಕೊಂಡು ಟ್ರಕ್ ಪಲ್ಲುವಿನಿಂದ ಸರ್ದರ್ಶಹರ್ ಕಡೆಗೆ ಹೋಗುತ್ತಿದ್ದಾಗ ಬಿಸ್ರಾಸರ್ ಗ್ರಾಮದಿಂದ ಬರುತ್ತಿದ್ದ ಕಾರಿಗೆ ಟ್ರಕ್ ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ಘಟನೆಯ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.
ಘಟನೆಯ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದು, ಪೊಲೀಸರು ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ