Ahmedabad;ಆಪ್ ನಾಯಕ ಗಾಧ್ವಿ ವಿರುದ್ಧ ಎಫ್ಐಆರ್ ದಾಖಲು
Team Udayavani, May 2, 2023, 6:20 AM IST
ಅಹಮದಾಬಾದ್: ಆಮ್ ಆದ್ಮಿ ಪಕ್ಷದ ಗುಜರಾತ್ ಘಟದ ಅಧ್ಯಕ್ಷ ಇಸುಧನ್ ಗಾಧ್ವಿ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ “ಮನ್ ಕಿ ಬಾತ್’ನ 100ನೇ ಕಾರ್ಯಕ್ರಮದ ಪ್ರಚಾರಕ್ಕೆ 830 ಕೋಟಿ ರೂ. ತೆರಿಗೆದಾರರ ಹಣವನ್ನು ವೆಚ್ಚ ಮಾಡಲಾಗಿದೆ ಎಂದು ಆರೋಪಿಸಿ ಟ್ವೀಟ್ ಮಾಡಿದ್ದಾರೆ.
ತಮ್ಮ ಆರೋಪದ ಟ್ವೀಟ್ಗಳಿಗೆ ಸೂಕ್ತ ದಾಖಲೆಗಳನ್ನು ಹೊಂದಿಲ್ಲ ಎಂಬ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ಸದ್ಯ ಗಾಧ್ವಿ ಟ್ವೀಟ್ ಡಿಲೀಟ್ ಮಾಡಿದ್ದಾರೆ. ಗುಜರಾತ್ ಪೊಲೀಸರು ಪಕ್ಷದ ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿ, ಎಫ್ಐಆರ್ ದಾಖಲಿಸುತ್ತಿದೆ ಎಂದು ಆಪ್ ಆರೋಪಿಸಿದೆ.