ಫೋನ್‌ನಲ್ಲಿ  ಜಾತಿ ನಿಂದನೆ: 5 ವರ್ಷ ಜೈಲು ಶಿಕ್ಷೆ

Team Udayavani, Nov 20, 2017, 6:00 AM IST

ಹೊಸದಿಲ್ಲಿ: ಸಾರ್ವಜನಿಕ ಸ್ಥಳದಲ್ಲಿ ನಿಂತು ಫೋನ್‌ ಮೂಲಕ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ವರ್ಗದವರ ಜಾತಿ ನಿಂದನೆ ಮಾಡಿದರೂ ಅದು ಕ್ರಿಮಿನಲ್‌ ಅಪರಾಧವಾಗುತ್ತದೆ. ಅಂಥ ತಪ್ಪಿಗೆ ಗರಿಷ್ಠ 5 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.

ಉತ್ತರಪ್ರದೇಶದ ಪ್ರಕರಣವೊಂದಕ್ಕೆ ಸಂಬಂಧಿಸಿ ತೀರ್ಪು ನೀಡುವಾಗ ಸುಪ್ರೀಂ ಕೋರ್ಟ್‌ ಈ ವಿಚಾರ ವನ್ನು ಸ್ಪಷ್ಟಪಡಿಸಿದೆ. ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಸೇರಿದ ಮಹಿಳೆಯೊಬ್ಬರಿಗೆ ಸಾರ್ವಜನಿಕ ಸ್ಥಳದಲ್ಲಿ ನಿಂತು ಫೋನ್‌ ಮೂಲಕ ಜಾತಿನಿಂದನೆ ಮಾಡಿದ ಆರೋಪಿಯ ವಿರುದ್ಧದ ಕ್ರಿಮಿನಲ್‌ ವಿಚಾರಣೆಗೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್‌ ನ್ಯಾ| ಜೆ. ಚೆಲಮೇಶ್ವರ ಮತ್ತು ನ್ಯಾ| ಅಬ್ದುಲ್‌ ನಜೀರ್‌ ಅವರನ್ನೊಳಗೊಂಡ ಪೀಠ ನಿರಾಕರಿಸಿದೆ. ಈ ಕುರಿತು ಆ.17ರಂದು ಅಲಹಾಬಾದ್‌ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿದೆ.

ಜತೆಗೆ ತಾನು ಮಹಿಳೆಯೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ಸಾರ್ವಜನಿಕ ಸ್ಥಳದಲ್ಲಿ ಇರಲಿಲ್ಲ ಎಂಬುದನ್ನು ವಿಚಾರಣೆ ವೇಳೆ ಸಾಬೀತುಪಡಿಸಿ ಎಂದು ಅರ್ಜಿದಾರನಿಗೆ ನ್ಯಾಯಪೀಠ ಸೂಚಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ