ಪದೋನ್ನತಿ: ಇಬ್ಬರು ನಿವೃತ್ತ ಸೇನಾಧಿಕಾರಿಗಳ ವಿರುದ್ಧ ಕೇಸು

Team Udayavani, May 21, 2020, 5:55 AM IST

ಪದೋನ್ನತಿ: ಇಬ್ಬರು ನಿವೃತ್ತ ಸೇನಾಧಿಕಾರಿಗಳ ವಿರುದ್ಧ ಕೇಸು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ರಕ್ಷಣಾ ಇಲಾಖೆಯ ಪರೀಕ್ಷೆಯಲ್ಲಿ 44 ಮಂದಿಗೆ ಕಾನೂನು ಬಾಹಿರವಾಗಿ ಪದೋನ್ನತಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ನಿವೃತ್ತ ಸೇನಾಧಿಕಾರಿಗಳ ವಿರುದ್ಧ ಸಿಬಿಐ ಕೇಸು ದಾಖಲಿಸಿದೆ. ಅವರ ಜತೆಗೆ ಇನ್ನೂ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ.

ನಿವೃತ್ತ ಮೇಜರ್‌ ಜನರಲ್‌ ಎಂ.ವಿ. ಭಟ್‌ ಮತ್ತು ಮತ್ತೂಬ್ಬ ನಿವೃತ್ತ ಮೇಜರ್‌ ಜನರಲ್‌ ಕೆ.ಆರ್‌.ಎಂ.ಕೆ.ಬಾಲಾಜಿ ಆರೋಪಕ್ಕೆ ಗುರಿಯಾಗಿರುವವರು.

ಹೈದರಾಬಾದ್‌ನ ಸರ್ವೇ ಟ್ರೈನಿಂಗ್‌ ಇನ್‌ಸ್ಟಿಟ್ಯೂಟ್‌ನ ನಿರ್ದೇಶಕರಾಗಿದ್ದ ಎಂ.ವಿ. ಭಟ್‌ ಮತ್ತು ಸಂಸ್ಥೆಯ ಡೆಪ್ಯುಟಿ ಸರ್ವೆಯರ್‌ ಜನರಲ್‌ ಆಗಿದ್ದ ಕೆ.ಆರ್‌.ಎಂ.ಕೆ. ಬಾಲಾಜಿ ಅವರು ರಕ್ಷಣಾ ಇಲಾಖೆಯ ಲಿಮಿಡೆಟ್‌ ಡಿಪಾರ್ಟ್‌ಮೆಂಟಲ್‌ನ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ 44 ಮಂದಿಗೆ ನಿಯಮ ಮೀರಿ ಅಂಕಗಳನ್ನು ನೀಡಿ ಅವರಿಗೆ ಪದೋನ್ನತಿ ನೀಡಿದ ಪ್ರಕರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿದ್ದಾರೆ.

ಅವರ ಜತೆಗೆ ಸಂಸ್ಥೆಯಲ್ಲಿ ಡೆಪ್ಯುಟಿ ಡೈರೆಕ್ಟರ್‌ ಆಗಿದ್ದ ಜೆ.ಕೆ. ರಥ್‌, ಲೆಕ್ಕಪತ್ರ ಅಧಿಕಾರಿಯಾಗಿದ್ದ ಆರ್‌. ರಾಮ ಸಿಂಗ್‌ ಹೆಸರೂ ಕೇಂದ್ರ ತನಿಖಾ ಸಂಸ್ಥೆಯ ಎಫ್ಐಆರ್‌ನಲ್ಲಿ ಉಲ್ಲೇಖವಾಗಿದೆ ಎಂದು ‘ಐಎಎನ್‌ಎಸ್‌’ ಸುದ್ದಿ ಸಂಸ್ಥೆಯ ವರದಿಯನ್ನು ಉಲ್ಲೇಖೀಸಿ ಹಲವು ಮಾಧ್ಯಮಗಳು ವರದಿ ಮಾಡಿವೆ.

ಪರೀಕ್ಷೆಯಲ್ಲಿ ಅಂಕಗಳನ್ನು ತಿದ್ದಲಾಗಿದೆ ಎಂಬ ದೂರನ್ನು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ 2018ರ ಅಕ್ಟೋಬರ್‌ನಲ್ಲಿ ಸಿಬಿಐ ಗಮನಕ್ಕೆ ತಂದಿತ್ತು. ಬಳಿಕ ಅದು ತನಿಖೆಯನ್ನು ಕೈಗೆತ್ತಿಕೊಂಡಿತ್ತು.

ಎಫ್ಐಆರ್‌ನಲ್ಲಿ ದಾಖಲಾಗಿರುವ ಮಾಹಿತಿ ಪ್ರಕಾರ 384 ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ, 298 ಮಂದಿ ಪರೀಕ್ಷೆ ಬರೆದಿದ್ದರು. 2002ರ ಆಗಸ್ಟ್‌ನಲ್ಲಿ ಆಗ ಬ್ರಿಗೇಡಿಯರ್‌ ಆಗಿದ್ದ ಎಂ.ವಿ. ಭಟ್‌ ಅವರ ಅಧ್ಯಕ್ಷತೆಯಲ್ಲಿ ನಾಲ್ವರು ಅಧಿಕಾರಿಗಳನ್ನು ಒಳಗೊಂಡ ಪರೀಕ್ಷಾ ಮಂಡಳಿಯನ್ನು ಸಂಸ್ಥೆ ರಚಿಸಿತ್ತು. ಬ್ರಿಗೇಡಿಯರ್‌ ರಾವ್‌ ಸದಸ್ಯ ಕಾರ್ಯದರ್ಶಿಯಾಗಿ, ರಥ್‌ ಎಸ್‌ಐಟಿ ಸದಸ್ಯರಾಗಿದ್ದರು.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.