ದೇಶದೆಲ್ಲೆಡೆ 110 ಕಡೆಗಳಲ್ಲಿ ಸಿಬಿಐ ಏಕಕಾಲದಲ್ಲಿ ದಾಳಿ

Team Udayavani, Jul 9, 2019, 2:05 PM IST

ಹೊಸದಿಲ್ಲಿ : ಸಿಬಿಐ ಅಧಿಕಾರಿಗಳು ಮಂಗಳವಾರ ಏಕಕಾಲಕ್ಕೆ ದೇಶದ 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ 110 ಪ್ರದೇಶಗಳಲ್ಲಿ ದಾಳಿ ನಡೆಸಿದ್ದಾರೆ. ಕ್ರಿಮಿನಲ್‌ ಪ್ರಕರಣಗಳು ಮತ್ತು ಭ್ರಷ್ಟಾಚಾರಕ್ಕೆ ಸಂಬಂದಿಸಿ ಈ ದಾಳಿ ನಡೆಸಿದ್ದಾರೆ.

ದೆಹಲಿ, ಭರತ್‌ಪುರ, ಮುಂಬಯಿ, ಚಂಡೀಗಡ, ಜಮ್ಮು, ಶ್ರೀನಗರ, ಪುಣೆ, ಜೈಪುರ, ಗೋವಾ, ಕಾನ್ಪುರ್, ರಾಯ್‌ಪುರ, ಹೈದರಾಬಾದ್‌ , ಮಧುರೈ, ಕೋಲ್ಕತಾ, ರೂರ್ಕೆಲಾ, ರಾಂಚಿ, ಬೊಕಾರೊ, ಲಕ್ನೋ, ಒಡಿಶಾ,, ಪಂಜಾಬ್, ಹರಿಯಾಣ, ಆಂಧ್ರಪ್ರದೇಶ, ಕರ್ನಾಟಕ, ಬಿಹಾರದ ವಿವಿಧ ಪ್ರದೇಶಗಳಲ್ಲಿ ದಾಳಿ ನಡೆಸಲಾಗಿದೆ.

ಭ್ರಷ್ಟಾಚಾರ, ಕ್ರಿಮಿನಲ್‌ ಚಟುವಟಿಕೆ ಮತ್ತು ಶಸ್ತ್ರಾಸ್ತ್ರ ಕಳ್ಳ ಸಾಗಾಣಿಕೆಗೆ ಸಂಬಂಧಿಸಿ 30 ಪ್ರತ್ಯೇಕ ಪ್ರಕರಣಗಳನ್ನು ಸಿಬಿಐ ದಾಖಲಿಸಿಕೊಂಡಿತ್ತು.

ಈ ತಿಂಗಳ ಆರಂಭದಲ್ಲಿ ಸಿಬಿಐ , 13 ಕಂಪೆನಿಗಳು ಮತ್ತು ಬ್ಯಾಂಕ್‌ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿ 1,139 ಕೋಟಿ ರೂಪಾಯಿ ಅಕ್ರಮದ ಕುರಿತಾಗಿ ತನಿಖೆ ನಡೆಸಿದ್ದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ