ಬೆಸ್ಟ್ ಆಫ್ ಲಕ್: ಸಿಬಿಎಸ್ ಇ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಸಿಬಿಎಸ್ ಇ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು 5,376 ಕೇಂದ್ರಗಳಲ್ಲಿ, ಪಿಯುಸಿ ಪರೀಕ್ಷೆ 4,983 ಕೇಂದ್ರಗಳಲ್ಲಿ ನಡೆಯಲಿದೆ

Team Udayavani, Feb 15, 2020, 1:22 PM IST

ನವದೆಹಲಿ: ಸಿಬಿಎಸ್ ಇಯ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಶನಿವಾರ ಆರಂಭಗೊಂಡಿದ್ದು, ಹತ್ತನೇ ತರಗತಿ ಪರೀಕ್ಷೆಗೆ 18 ಲಕ್ಷದ 89 ಸಾವಿರ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಗೆ 12 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ವರದಿ ತಿಳಿಸಿದೆ.

ಇದರಲ್ಲಿ ಕೇಂದ್ರೀಯ ವಿದ್ಯಾಲಯದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 89 ಅಭ್ಯರ್ಥಿಗಳು ಹಾಗೂ ಪಿಯುಸಿ ಪರೀಕ್ಷೆ 123 ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ವರದಿ ತಿಳಿಸಿದೆ. ಸಿಬಿಎಸ್ ಇ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು 5,376 ಕೇಂದ್ರಗಳಲ್ಲಿ, ಪಿಯುಸಿ ಪರೀಕ್ಷೆ 4,983 ಕೇಂದ್ರಗಳಲ್ಲಿ ನಡೆಯಲಿದೆ ಎಂದು ವರದಿ ವಿವರಿಸಿದೆ.

ಪರೀಕ್ಷೆ ಸುಗಮವಾಗಿ ನಡೆಯಲು ಎಲ್ಲಾ ರೀತಿಯ ವ್ಯವಸ್ಥೆ ಕೈಗೊಳ್ಳಲಾಗಿದೆ. ಪರೀಕ್ಷೆಯ ದಿನ ಪ್ರತಿಯೊಬ್ಬ ವಿದ್ಯಾರ್ಥಿಯು 9.45ಗಂಟೆಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕೆಂದು ಸೂಚನೆ ನೀಡಲಾಗಿದೆ ಎಂದು ಶಿಕ್ಷಣ ಅಧಿಕಾರಿಗಳು ತಿಳಿಸಿದ್ದಾರೆ.

10ಗಂಟೆಗೆ ಪರೀಕ್ಷೆ ಆರಂಭವಾಗಲಿದದು, ಸಿಬಿಎಸ್ ಇ ಕಠಿಣ ನಿಯಮದ ಪ್ರಕಾರ 10ಗಂಟೆ ನಂತರ ಬಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಹಾಲ್ ಟಿಕೆಟ್ ಕಡ್ಡಾಯವಾಗಿ ತರಬೇಕಾಗಿದೆ. ವಿದ್ಯಾರ್ಥಿಗಳಿಗೆ ಶುಭವಾಗಲಿ ಎಂದು ಸಿಬಿಎಸ್ ಇ ಕಾರ್ಯದರ್ಶಿ ಅನುರಾಗ್ ತ್ರಿಪಾಠಿ ಹಾಗೂ ಅಧ್ಯಕ್ಷೆ ಅನಿತಾ ಕಾರ್ವಾಲ್ ತಿಳಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಮಂಗಳೂರು: ಭಾರತೀಯ ಜನತಾ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ನೂತನ ಅಧ್ಯಕ್ಷರಾಗಿ ಸುದರ್ಶನ ಎಂ. ಸೋಮವಾರ ಪದಗ್ರಹಣ ಮಾಡಲಿದ್ದಾರೆ.ಮೂಡುಬಿದಿರೆಯ ಬಿಲ್ಲವ ಸಮುದಾಯದ...

  • ಹೊಸದಿಲ್ಲಿ: ಅತ್ತ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾರತ ಭೇಟಿಗೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿರುವಂತೆಯೇ ಇತ್ತ ಕಾಂಗ್ರೆಸ್‌ ಮತ್ತು ಬಿಜೆಪಿ ಪರಸ್ಪರ...

  • ಬೆಳ್ತಂಗಡಿ: ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಶನಿವಾರ ಮುಂಜಾನೆ ಬೆಳ್ಳಿ ರಥೋತ್ಸವ ನಡೆಯಿತು. ಧರ್ಮಾಧಿಕಾರಿ...

  • ಜೈಪುರ: ಕಾಮಗಾರಿ ಆರಂಭಿಸಿದ ಮೂರು ಅಥವಾ ಮೂರೂವರೆ ವರ್ಷಗಳ‌ ಒಳಗೆ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ...

  • ಉಡುಪಿ: ಬರ್ಮಿಂಗ್‌ಹ್ಯಾಮ್‌ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ| ಸರ್‌ ಡೇವಿಡ್‌ ಈಸ್ಟ್‌ವುಡ್‌ ಮತ್ತು ಮಣಿಪಾಲ ಮಾಹೆ ವಿಶ್ವವಿದ್ಯಾನಿಲಯದ ಕುಲಪತಿ ಡಾ| ಎಚ್‌....