ಸಿಬಿಎಸ್ಇ 10, 12ನೇ ತರಗತಿ ಫಲಿತಾಂಶ ಪ್ರಕಟ
10ನೇ ತರಗತಿಯಲ್ಲಿ ಶೇ. 94ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ: 12ನೇ ತರಗತಿಯಲ್ಲಿ ಶೇ. 92ರಷ್ಟು ವಿದ್ಯಾರ್ಥಿಗಳು ಪಾಸ್
Team Udayavani, Jul 22, 2022, 9:14 PM IST
ನವದೆಹಲಿ: ಸಿಬಿಎಸ್ಇ 10 ಮತ್ತು 12ನೇ ತರಗತಿ ಫಲಿತಾಂಶ ಶುಕ್ರವಾರ ಪ್ರಕಟವಾಗಿದೆ. ಎರಡೂ ತರಗತಿಗಳ ಫಲಿತಾಂಶ ಒಟ್ಟಿಗೆ ಹೊರಬಿದ್ದಿರುವುದು ಇದೇ ಮೊದಲು.
10ನೇ ತರಗತಿ ಪರೀಕ್ಷೆಯಲ್ಲಿ 94.40 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಿಗಿಂತ ಶೇ.1.4 ಹೆಚ್ಚು ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದಾರೆ. 64,908 ವಿದ್ಯಾರ್ಥಿಗಳು ಶೇ.95ಕ್ಕಿಂತ ಅಧಿಕ ಅಂಕ ಪಡೆದಿದ್ದರೆ, 2,36,993 ವಿದ್ಯಾರ್ಥಿಗಳು ಶೇ.90ಕ್ಕಿಂತ ಅಧಿಕ ಅಂಕ ಪಡೆದಿದ್ದಾರೆ. ಉತ್ತರ ಪ್ರದೇಶದ ನೋಯ್ಡಾದ ವಿದ್ಯಾರ್ಥಿಯಾಗಿರುವ ಮಾಯಾಂಕ್ 500ಕ್ಕೆ 500 ಅಂಕಗಳನ್ನು ಪಡೆದು ಟಾಪರ್ ಆಗಿದ್ದಾರೆ.
12ನೇ ತರಗತಿಯ ಪರೀಕ್ಷೆಯಲ್ಲಿ ಶೇ.94.54 ವಿದ್ಯಾರ್ಥಿನಿಯರು ಮತ್ತು ಶೇ.91.25 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 33,432 ವಿದ್ಯಾರ್ಥಿಗಳು ಶೇ.95ಕ್ಕಿಂತ ಅಧಿಕ ಅಂಕ ಪಡೆದಿದ್ದಾರೆ. ಉತ್ತರ ಪ್ರದೇಶದ ಬುಲಂದ್ಶಹರ್ನ ತಾನ್ಯಾ ಸಿಂಗ್ ಮತ್ತು ನೋಯ್ಡಾದ ಯುವಾಕ್ಷಿ ವಿಗ್ ಶೇ.100 ಅಂಕ ಪಡೆದು, ಟಾಪರ್ ಸ್ಥಾನದಲ್ಲಿದ್ದಾರೆ.
ಹೆಚ್ಚು ಉತ್ತೀರ್ಣ: ಬೆಂಗಳೂರು ದ್ವಿತೀಯ
ಸಿಬಿಎಸ್ಸಿ 10ನೇ ತರಗತಿ ಫಲಿತಾಂಶದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾದ ಪ್ರದೇಶದಲ್ಲಿ ಬೆಂಗಳೂರು ಎರಡನೇ ಸ್ಥಾನದಲ್ಲಿದೆ. ತಿರುವನಂತಪುರಂನಲ್ಲಿ ಶೇ.98.93 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ಅದು ಮೊದಲನೇ ಸ್ಥಾನದಲ್ಲಿದೆ. ಬೆಂಗಳೂರಿನ ಶೇ.98.16 ವಿದ್ಯಾರ್ಥಿಗಳು ಸಿಬಿಎಸ್ಸಿ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ