ಮಾಸಿಕ 50 ಲಕ್ಷ ಪಿಪಿಇ ಕಿಟ್ ರಫ್ತಿಗೆ ಅವಕಾಶ
Team Udayavani, Jun 30, 2020, 7:03 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ತಿಂಗಳೊಂದಕ್ಕೆ 50 ಲಕ್ಷ ಪಿಪಿಇ (ವೈಯಕ್ತಿಕ ಸುರಕ್ಷತಾ ಸಾಧನ) ವೈದ್ಯಕೀಯ ಕವಚಗಳನ್ನು ರಫ್ತು ಮಾಡಲು ಅವಕಾಶ ನೀಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.
ಮೇಕ್ ಇನ್ ಇಂಡಿಯಾ ಅಡಿ ಉತ್ಪನ್ನಗಳನ್ನು ತಯಾರಿಸಿ ರಫ್ತು ಮಾಡುವುದನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಕೇಂದ್ರ ಸಚಿವ ಪಿಯೂಶ್ ಗೋಯಲ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವ ಗೋಯಲ್, ಅದೇ ಪೋಸ್ಟ್ ಅನ್ನು ಫೇಸ್ಬುಕ್ನಲ್ಲೂ ಶೇರ್ ಮಾಡಿದ್ದಾರೆ. ಕೋವಿಡ್ 19 ವಿರುದ್ಧ ಹೋರಾಡುತ್ತಿರುವ ವೈದ್ಯರು, ಆರೋಗ್ಯ ಕಾರ್ಯಕರ್ತರು ಸಾಧ್ಯವಾದಷ್ಟು ಕೋವಿಡ್ 19 ವೈರಸ್ ಸಂಪರ್ಕಕ್ಕೆ ಬಾರದಿರಲಿ ಎಂಬ ಉದ್ದೇಶದಿಂದ ಬಳಸುವ ಗಾಗಲ್ಗಳು, ಫೇಸ್ ಶೀಲ್ಡ್, ಮಾಸ್ಕ್, ಕೈಗವಸು, ಹೆಡ್ ಕವರ್ ಮತ್ತು ಶೂ ಒಳಗೊಂಡ ಪಿಪಿಇ ಕಿಟ್ಗಳನ್ನು ರಫ್ತು ಮಾಡಲು ಅವಕಾಶ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ